ಉಡುಪಿ: 12 ನೇ ಶತಮಾನದಲ್ಲಿ ಆರಂಭವಾದ ವಚನ ಚಳವಳಿಗಿಂತ ಮೊದಲೇ ಸರಳ ವಚನಗಳನ್ನು ರಚಿಸಿದ ಆದ್ಯ ವಚನಕಾರ ಎಂಬ ಹೆಗ್ಗಳಿಕೆಗೆ ದಾಸಿಮಯ್ಯ ಪಾತ್ರರಾಗಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮೂಲವಾಗಿರುವ ವಚನ ಸಾಹಿತ್ಯದಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಂಡಿದೆ. ಇದಕ್ಕೆ ದೇವರ ದಾಸಿಮಯ್ಯ ಕಾರಣಕರ್ತರು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್ ಹೇಳಿದರು.ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಶೋಭಾ ಹರಿಪ್ರಸಾದ್ ಉಡುಪಿ ಮಾತನಾಡಿ, ಭಾರತದ ಸಾಹಿತ್ಯ ಜಗತ್ತಿನ ಹಳೆಯ ಸಾಹಿತ್ಯವಾಗಿದೆ. ಇದರಲ್ಲಿ 8 ರಿಂದ 18 ನೇ ಶತಮಾನದವರೆಗೆ ಮಧ್ಯಕಾಲೀನ ಸಾಹಿತ್ಯದಲ್ಲಿ ವಚನ ಸಾಹಿತ್ಯ ಬಹಳ ಮಹತ್ತರ ಪಾತ್ರ ವಹಿಸುತ್ತದೆ. ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ, ಶೈಕ್ಷಣಿಕ ಮಾತ್ರವಲ್ಲದೇ ರಾಜಕೀಯ ಕ್ಷೇತ್ರದಲ್ಲಿ ಬದಲಾವಣೆಗೆ ಈ ವಚನ ಸಾಹಿತ್ಯ ಕಾರಣವಾದವು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ವಹಿಸಿದ್ದರು. ನೇಕಾರ ಸಮುದಾಯದಲ್ಲಿ ಸಾಧನೆಗೈದ ಗಿರೀಶ್ ಶೆಟ್ಟಿಗಾರ್ ವಿಟ್ಲ ಅವರನ್ನು ಸನ್ಮಾನಿಸಲಾಯಿತು.
ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ರವಿ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಜಯರಾಮ ಶೆಟ್ಟಿಗಾರ್ ಮಣಿಪಾಲ ನಿರೂಪಿಸಿ, ಕಾರ್ಯದರ್ಶಿ ಡಾ.ವೆಂಕಟರಾಯ್ ಶೆಟ್ಟಿಗಾರ್ ವಂದಿಸಿದರು.ಕನ್ನಡ ಸಾಹಿತ್ಯಕ್ಕೆ ಮೂಲ ವಚನಗಳು : ಎಂ.ಎ.ಗಫೂರ್
12 ನೇ ಶತಮಾನದಲ್ಲಿ ಆರಂಭವಾದ ವಚನ ಚಳವಳಿಗಿಂತ ಮೊದಲೇ ಸರಳ ವಚನಗಳನ್ನು ರಚಿಸಿದ ಆದ್ಯ ವಚನಕಾರ ಎಂಬ ಹೆಗ್ಗಳಿಕೆಗೆ ದಾಸಿಮಯ್ಯ ಪಾತ್ರರಾಗಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮೂಲವಾಗಿರುವ ವಚನ ಸಾಹಿತ್ಯದಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಂಡಿದೆ. ಇದಕ್ಕೆ ದೇವರ ದಾಸಿಮಯ್ಯ ಕಾರಣಕರ್ತರು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.