ಸಾರಾಂಶ
ಜೀವನದಲ್ಲಿ ಆಸ್ತಿ, ಸಂಪತ್ತು ಮತ್ತು ಅಧಿಕಾರ ಸೇರಿ ಎಲ್ಲವನ್ನು ಗಳಿಸುವುದು ಬಹಳ ಸುಲಭ. ಆದರೆ, ನಮಗೆ ಆರೋಗ್ಯ ಅತ್ಯಮೂಲ್ಯವಾದದ್ದು. ಈ ನಮ್ಮ ಕ್ಲಿನಿಕ್‌ನ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ : ಜೀವನದಲ್ಲಿ ಆಸ್ತಿ, ಸಂಪತ್ತು ಮತ್ತು ಅಧಿಕಾರ ಸೇರಿ ಎಲ್ಲವನ್ನು ಗಳಿಸುವುದು ಬಹಳ ಸುಲಭ. ಆದರೆ, ನಮಗೆ ಆರೋಗ್ಯ ಅತ್ಯಮೂಲ್ಯವಾದದ್ದು. ಈ ನಮ್ಮ ಕ್ಲಿನಿಕ್‌ನ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬಂದಾಳ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತಿ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಂದ ತೆರೆಯಲಾಗಿರುವ ನೂತನ ನಮ್ಮ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು. ಪಟ್ಟಣದ ಮದೀನಾ ನಗರ ಮತ್ತು ಹೆಗ್ಗೆರೇಶ್ವರ ದೇವಸ್ಥಾನದ ಬಳಿ ಸಿಂದಗಿ ನಗರಕ್ಕೆ ಮತ್ತೆರಡು ನಮ್ಮ ಕ್ಲಿನಿಕ್‌ಗಳು ಮಂಜೂರಾಗಿವೆ. ಇಲ್ಲಿ ದೊರೆಯುವ ಎಲ್ಲ ಸೌಲಭ್ಯಗಳ ಸದುಪಯೋಗವನ್ನು ಎಲ್ಲ ಸಾರ್ವಜನಿಕರು ಪಡೆದುಕೊಳ್ಳಬೇಕು. ಈ ಭಾಗದ ಜನರ ಆರೋಗ್ಯದ ದೃಷ್ಠಿಯಿಂದ ನೂತನ ಶಾಖೆಯನ್ನು ಪ್ರಾರಂಭ ಮಾಡಲಾಗಿದೆ.
ವಿಶೇಷವಾಗಿ ಕೊಳಗೇರಿ ನಿವಾಸಿಗಳಿಗೆ ಇದು ಹೆಚ್ಚಿನ ಪ್ರಯೋಜನವಾಗಬೇಕು. ಎಲ್ಲರೂ ಉತ್ತಮ ಆರೋಗ್ಯವಂತರಾಗಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರಕಾರ ಸಿಂದಗಿ ನಗರಕ್ಕೆ ಎರಡು ನಮ್ಮ ಕ್ಲಿನಿಕ್ ಮಂಜೂರು ಮಾಡಿದ್ದು ಸಂತಸ ತಂದಿದೆ ಎಂದು ಹೇಳಿದರು. ಈ ವೇಳೆ ಜಿಲ್ಲಾ ವೈದ್ಯಾಧಿಕಾರಿ ಡಾ.ಸಂಪತಕುಮಾರ ಗುಣಾರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆಸ್ಪತ್ರೆಯ ನಾಮ ನಿರ್ದೇಶಿತ ಸದಸ್ಯರಾದ ಶಾಂತೂ ರಾಣಾಗೋಳ, ಸತೀಶ ಕಕ್ಕಸಗೇರಿ, ಸಾಯಬಣ್ಣ ಪುರದಾಳ, ಶಾಂತಗೌಡ ಬಿರಾದಾರ, ವಿಕಾಸ ಕೋತ, ಜಾಕೀರ್ ಸಿಂದಗಿಕರ, ವಿನಯ ಕುಲಕರ್ಣಿ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ವ್ಯವಸ್ಥಾಪಕ ಮಹಾಲಿಂಗ ಫಕೀರಪೂರ, ಶಾಂತೂ ಕುಂಬಾರ, ಭಾಗಣ್ಣ, ಲತಾ, ಪರಶುರಾಮ ಕೂಚಬಾಳ, ಅಶೋಕ ವಗ್ಗರ, ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
18ಎಸ್‌ಎನ್‌ಡಿ02: ಪಟ್ಟಣದ ಬಂದಾಳ ರಸ್ತೆಯಲ್ಲಿ ವಿಜಯಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭವನ್ನು ಶಾಸಕ ಅಶೋಕ ಮನಗೂಳಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.