ಮಳವಳ್ಳಿಯಲ್ಲಿ ಶಾಸಕರಿಂದ ನಮ್ಮ ಕ್ಲಿನಿಕ್‌ ಉದ್ಘಾಟನೆ

| Published : Aug 03 2025, 01:30 AM IST

ಮಳವಳ್ಳಿಯಲ್ಲಿ ಶಾಸಕರಿಂದ ನಮ್ಮ ಕ್ಲಿನಿಕ್‌ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸುಧಾರಿತ ಚಿಕಿತ್ಸೆಗಳ ಮೂಲಕ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ 13ನೇ ವಾರ್ಡ್ ನಲ್ಲಿ ಮತ್ತೊಂದು ಕ್ಲಿನಿಕ್ ತೆರಯಲು ಚಿಂತನೆ ನಡೆಸಲಾಗಿದೆ. ತುರ್ತು ಆರೋಗ್ಯ ಸೇವೆಗೆ ಇದು ಅಗತ್ಯವಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ 7ನೇ ವಾರ್ಡ್ ನ ಈದ್ಗಾ ಮೊಹಲ್ಲಾದಲ್ಲಿ ಆರಂಭಗೊಂಡ ನಮ್ಮ ಕ್ಲಿನಿಕ್ ಅನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕರು, ಸರ್ಕಾರ ರೂಪಿಸಿರುವ ಎಲ್ಲ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಮುಂದುವರೆದ ಭಾಗವಾಗಿ ಪಟ್ಟಣದಲ್ಲಿ 3 ನಮ್ಮ ನಮ್ಮ ಕ್ಲಿನಿಕ್ ತೆರೆಯಲು ಮುಂದಾಗಿದ್ದೇವೆ ಎಂದರು.

ಈಗ 2ನೇ ಕ್ಲಿನಿಕ್ ಉದ್ಘಾಟಿಸಲಾಗಿದೆ. ಸ್ಥಳೀಯವಾಗಿ ಜನರಿಗೆ ಉತ್ತಮ ಆರೋಗ್ಯ ಸಿಗುವಂತಾಗಲಿ ಎನ್ನುವ ದೃಷ್ಟಿಯಿಂದ ಸರ್ಕಾರ ಆಧುನಿಕ ತಂತ್ರಜ್ಞಾನವುಳ್ಳ ವೈದ್ಯಕೀಯ ಸೌಲಭ್ಯ ಕಲ್ಪಿಸುತ್ತಿದೆ. ಜನರು ಇದರ ಸಮರ್ಪಕ ಬಳಕೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸುಧಾರಿತ ಚಿಕಿತ್ಸೆಗಳ ಮೂಲಕ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ 13ನೇ ವಾರ್ಡ್ ನಲ್ಲಿ ಮತ್ತೊಂದು ಕ್ಲಿನಿಕ್ ತೆರಯಲು ಚಿಂತನೆ ನಡೆಸಲಾಗಿದೆ. ತುರ್ತು ಆರೋಗ್ಯ ಸೇವೆಗೆ ಇದು ಅಗತ್ಯವಾಗಿದೆ. ಸ್ಥಳೀಯ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಇಂಥ ಕೇಂದ್ರಗಳು ಸಹಕಾರಿಯಾಗಿವೆ ಎಂದರು.

ಈ ವೇಳೆ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಸದಸ್ಯ ನೂರುಲ್ಲಾ, ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್, ತಾಲೂಕು ನೋಡಲ್ ಅಧಿಕಾರಿ ಡಾ.ಅಶ್ವಥ್, ಡಾ.ನಿತ್ಯಶ್ರೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ಸಿ.ಪಿ.ರಾಜು, ಮುಖಂಡರಾದ ದಸ್ತಗಿರಿ ಪಾಷಾ, ಮುಕ್ರಂ ಪಾಷಾ, ಅಬ್ದುಲ್ ಖಾಲ್ಕ್ ಪಾಲ್ಗೊಂಡಿದ್ದರು.ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ:

ತಾಲೂಕಿನ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪಣಕನಹಳ್ಳಿ, ಗೊರವಾಲೆ ಎನ್.ಜೆ.ವೈ ಮಾರ್ಗ ಮತ್ತು ಸಂಪಹಳ್ಳಿ ಐ.ಪಿ ಮಾರ್ಗದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಆಗಸ್ಟ್ 4 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಮಾಂತರ ಪ್ರದೇಶಗಳಾದ ಸಂಪಹಳ್ಳಿ, ಗೊರವಾಲೆ, ಬಿ. ಹೊಸಹಳ್ಳಿ, ಬೀರಗೌಡನಹಳ್ಳಿ, ಶಂಭೂನಹಳ್ಳಿ, ಕೋಣನಹಳ್ಳಿ, ಪಣಕನಹಳ್ಳಿ, ಹೊಳಲು, ಎಂ. ಜಿ. ಬಡಾವಣೆ, ತಂಡಸನಹಳ್ಳಿ, ಸಿದ್ದಯ್ಯನಕೊಪ್ಪಲು, ವೈ.ಯರಹಳ್ಳಿ , ಅವ್ವೇರಹಳ್ಳಿ, ಸಂಪಹಳ್ಳಿ ಐ.ಪಿ ಮಾರ್ಗ ಹಾಗೂ ಈ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಇಂದು ವಿದ್ಯುತ್ ವ್ಯತ್ಯಯ

ಮಂಡ್ಯ: ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಲ್ಲಹಳ್ಳಿ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಆಗಸ್ಟ್ 3 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ತಾಲೂಕಿನ ಕಲ್ಲಹಳ್ಳಿ, ಕಿರಗಂದೂರು, ನಾಡಪ್ರಭು ಕೆಂಪೇಗೌಡ ಬಡಾವಣೆ, ಬಂದೀಗೌಡಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.