ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವದ ಅತ್ಯುತ್ತಮ ವ್ಯವಸ್ಥೆಗೆ ಡಾ.ಬಿ.ಆರ್.ಅಂಬೇಡ್ಕರ್‌ವರ ಸಂವಿಧಾನವು ಜಗತ್ತಿಗೆ ಮಾದರಿಯಾಗಿದ್ದು, ಸರ್ವರಿಗೂ ಸಮಾನತೆ ಮೂಡಿಸವುದರ ಜೊತೆಗೆ ಸಾಮಾನ್ಯರು ಇಂದು ಉನ್ನತ ಸ್ಥಾನವನ್ನು ಅಲಂಕರಿಸುವಂತ ವ್ಯವಸ್ಥೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಕನ್ನಡಪ್ರಭ ವಾರ್ತೆ ಸವದತ್ತಿ
ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವದ ಅತ್ಯುತ್ತಮ ವ್ಯವಸ್ಥೆಗೆ ಡಾ.ಬಿ.ಆರ್.ಅಂಬೇಡ್ಕರ್‌ವರ ಸಂವಿಧಾನವು ಜಗತ್ತಿಗೆ ಮಾದರಿಯಾಗಿದ್ದು, ಸರ್ವರಿಗೂ ಸಮಾನತೆ ಮೂಡಿಸವುದರ ಜೊತೆಗೆ ಸಾಮಾನ್ಯರು ಇಂದು ಉನ್ನತ ಸ್ಥಾನವನ್ನು ಅಲಂಕರಿಸುವಂತ ವ್ಯವಸ್ಥೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.ಇಲ್ಲಿನ ಎಸ್.ಕೆ.ಹೈಸ್ಕೂಲ್ ಮೈದಾನದಲ್ಲಿ ನಡೆದ ೭೭ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೊಸ್ಕರ ಅನೇಕ ಯೋಜನೆಗಳನ್ನು ರೂಪಿಸಲಾಗಿದ್ದು, ಪಟ್ಟಣದಲ್ಲಿ ಹಮ್ಮಿಕೊಳ್ಳಲಿರುವ ₹೧೨೪ ಕೋಟಿಗಳ ವೆಚ್ಚದ ಒಳಚರಂಡಿ ಯೋಜನೆಗೆ ಪ್ರಾರಂಭಿಕವಾಗಿ ₹೪೧ ಕೋಟಿಗಳಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿದೆ ಎಂದರು. ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಸಂದೇಶವಾಚನ ಮಾಡಿದರು. ಮಿನಿ ವಿಧಾನಸೌಧದ ಮುಂದೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಧ್ವಜಾರೋಹಣ ನೆವೇರಿಸಿದರು. ಅಲ್ಲಿಂದ ಎಲ್ಲ ಶಾಲಾ ವಿದ್ಯಾರ್ಥಿಗಳು ಮತ್ತು ರೂಪಕಗಳು ಪ್ರಭಾತ ಪೇರಿ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸ್.ಕೆ.ಹೈಸ್ಕೂಲ್ ಮೈದಾನ ತಲುಪಿ ಅಲ್ಲಿ ಸಮಾರಂಭವಾಗಿ ಮಾರ್ಪಟ್ಟಿತು. ಸಮಾರಂಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನೆರವೇರಿದವು. ವೇದಿಕೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ, ಗೌರವಿಸಲಾಯಿತು.ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಶಿವರಾಜ ಗುಡದೂರ, ಬಸವರಾಜ ಅರಭಾವಿ, ಸಾವಿತ್ರಿ ಕುಲಕರ್ಣಿಯವರನ್ನು ಸರ್ಕಾರದ ಸುತ್ತೋಲೆ ಪ್ರಕಾರ ಅವರನ್ನು ಸನ್ಮಾನಿಸಿ ಅವರಿಗೆ ತಲಾ ₹೫೦ ಸಾವಿರಗಳ ಪ್ರೋತ್ಸಾಹ ಧನ ನೀಡಲಾಯಿತು. ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಉಪಾಧ್ಯಕ್ಷ ಮಾರುತಿ ಬಸಳಿಗುಂದಿ, ಶಿವಕುಮಾರ ರಾಠೋಡ, ತಾಪಂ ಇಒ ಆನಂದ ಬಡಕುಂದ್ರಿ, ಗ್ರೇಡ್-೨ ತಹಸೀಲ್ದಾರ್ ಎಂ.ಎನ್.ಮಠದ, ಪೌರಾಯುಕ್ತ ಸಂಗನಬಸಯ್ಯ ಗದಗಿಮಠ, ಶಿರಸ್ತೆದಾರ ಶಶಿರಾಜ ವನಕಿ, ಸಿಪಿಐ ಸುರೇಶ ಬೆಂಡೆಗುಂಬಳ, ನೌಕರರ ಸಂಘದ ಅಧ್ಯಕ್ಷ ಅಶೋಕ ಮುರಗೋಡ, ಕಿರಣ ಕುರಿ, ರತ್ನಾ ಕದಮ, ಶಿವಾನಂದ ಪಟ್ಟಣಶೆಟ್ಟಿ, ಕಲ್ಲಪ್ಪ ಪೂಜಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಕಾಜಿ ಸ್ವಾಗತಿಸಿದರು. ಶಿವಾನಂದ ತಾರಿಹಾಳ ನಿರೂಪಿಸಿದರು. ಕ್ಷೇತ್ರ ಸಮನ್ವಯಾಕಾರಿ ಬಿ.ಎನ್.ಬ್ಯಾಳಿ ವಂದಿಸಿದರು. ೨೪/೭ ಕುಡಿಯುವ ನೀರಿನ ಯೋಜನೆ ಪ್ರಾರಂಭಗೊಂಡಿದ್ದು, ಸುಕ್ಷೇತ್ರ ಯಲ್ಲಮ್ಮಾ ದೇವಸ್ಥಾನವನ್ನು ಮಾದರಿ ದೇವಸ್ಥಾನವನ್ನಾಗಿ ಮಾಡಲು ₹೨೧೫ ಕೋಟಿಗಳ ವೆಚ್ಚದಲ್ಲಿ ವಿಶೇಷವಾದಂತ ಅಭಿವೃದ್ಧಿಯನ್ನು ಕೈಗೊಳ್ಳಲಾಗುತ್ತಿದೆ. ೧೫೦ ವರ್ಷಗಳನ್ನು ಪೂರೈಸುತ್ತಿರುವ ಸವದತ್ತಿ ಯಲ್ಲಮ್ಮಾ ಪುರಸಭೆಯು ಇಂದು ನಗರಸಭೆಯಾಗಿ ನಾನು ಶಾಸಕನಾದ ಮೇಲೆ ಮೇಲ್ದರ್ಜೆಗೇರಿರುವುದು ಹೆಮ್ಮೆಯ ವಿಷಯ.
-ವಿಶ್ವಾಸ ವೈದ್ಯ, ಶಾಸಕರು.