ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ದೇಶವಿದೆ: ಡಾ.ಕೆ.ಜೆ.ಕಾಂತರಾಜ್

| Published : Aug 16 2024, 12:48 AM IST

ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ದೇಶವಿದೆ: ಡಾ.ಕೆ.ಜೆ.ಕಾಂತರಾಜ್
Share this Article
  • FB
  • TW
  • Linkdin
  • Email

ಸಾರಾಂಶ

ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವೂ ನಿಂತಿದೆ ಎಂದು ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.

ತರೀಕೆರೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವೂ ನಿಂತಿದೆ ಎಂದು ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.

ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಾಡುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ಅನೇಕ ಚಳವಳಿಗಳಲ್ಲಿ ಹೋರಾಡಿದ ಲಾಲ ಲಜಪತ್ ರಾಯ್, ಬಾಲ ಗಂಗಾಧರ ತಿಲಕ್, ಮಹಾತ್ಮಾ ಗಾಂಧೀಜಿ, ಭಗತ್ ಸಿಂಗ್, ಸಂವಿಧಾನ ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್‌ ಸ್ಮರಿಸಿಕೊಳ್ಳಬೇಕು., ದೇಶದ ಉನ್ನತಿಗೆ ನಾವು ಶ್ರಮಿಸಬೇಕು. ಸಂಸ್ಕಾರ ಸಂಪನ್ನರಾಗಬೇಕು ಎಂದು ಹೇಳಿದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ನಾವು ದೊಡ್ಡ ಗುರಿ ಹೊಂದಿರಬೇಕು. ಮನುಷ್ಯ ಎಲ್ಲ ಜೀವಿಗಿಂತಲೂ ಉತ್ತಮನಾಗಿದ್ದೇವೆ. ಬುದ್ಧಿವಂತಿಕೆ ಮತ್ತು ತಾಂತ್ರಿಕತೆ ಬಳಸಿಕೊಳ್ಳಬೇಕು. ಕಚೇರಿಗೆ ಬಂದ ಬಡಜನರು ಸಂತೋಷದಿಂದ ಹಿಂದಿರುಗಬೇಕು. ಜನರ ಕಷ್ಟವನ್ನು ಅಧಿಕಾರಿಗಳು ಪರಿಹರಿಸಬೇಕು. ತಾಲೂಕಿನ ಅನೇಕ ಕಡೆಗಳಲ್ಲಿ ಕೆಪಿಎಸ್ ಶಾಲೆ ಸ್ಥಾಪಿಸಿದ್ದು, ತರೀಕೆರೆಯಲ್ಲೂ ಕೆಪಿಎಸ್ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಚುನಾವಣಾ ಪೂರ್ವದಲ್ಲಿ ತಿಳಿಸಿದಂತೆ ತರೀಕೆರೆ ಪಟ್ಟಣದ ರಸ್ತೆಯನ್ನು ಚತುಷ್ಪದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು, ರಸ್ತೆ ಅಭಿವೃದ್ಧಿ ಕಾರ್ಯಾದೇಶ ಆಗಿದೆ. ಮಳೆ ಕಡಿಮೆಯಾಗುತ್ತಿದ್ದ ಹಾಗೆ ಅಭಿವೃದ್ಧಿ ಕೆಲಸ ಶುರುವಾಗುತ್ತದೆ. ಪಟ್ಟಣದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಅಭಿವೃದ್ಧಿ, ತರೀಕೆರೆ ಮತ್ತು ಅಜ್ಜಂಪುರಕ್ಕೆ ನಿರಂತರ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದರು.

ಸಾಧಕರಿಗೆ ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಹಸೀಲ್ದಾರ್ ವಿ.ಎಸ್.ರಾಜೀವ್, ಡಿವೈಎಸ್.ಪಿ.ಹಾಲಮೂರ್ತಿರಾವ್, ತಾಪಂ ಕಾರ್ಯನಿರ್ವಹಣಾಧಿಕಾರಿ ದಾ.ದೇವೇಂದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ , ಟಿ.ಗೋವಿಂದಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.15ಕೆಟಿಆರ್.ಕೆ.1ಃ ತರೀಕೆರೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಜೆ.ಎಚ್.ಶ್ರೀನಿವಾಸ್, ತಹಸೀಲ್ದಾರ್ ವಿ.ಎಸ್.ರಾಜೀವ್, ಡಿವೈಎಸ್.ಪಿ.ಹಾಲಮೂರ್ತಿರಾವ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಇದ್ದರು.