ಸಾರಾಂಶ
ರಸ್ತೆಗಳ ಅಗಲೀಕರಣ, ಕೆರೆಗಳ ಮುಚ್ಚುವಿಕೆ, ಕಾಡಿನ ನಾಶ ಇದೇ ರೀತಿ ಪ್ರಕೃತಿ ನಾಶವಾಗುತ್ತಿದೆ. ಪ್ರಾಣಿ ಸಂಕುಲ ಮನುಷ್ಯ ಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಬೇಕಾದರೆ ಪ್ರತಿಯೊಬ್ಬರು ಗಿಡ ನೆಟ್ಟು ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪಂಚಭೂತಗಳಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಸಂಗೀತ ದಿನೇಶ್ ಹೇಳಿದರು.ತಾಲೂಕಿನ ಹರಿಹರಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಹರಿಹರಪುರ ವಲಯ, ಕಿಕ್ಕೇರಿ ಯೋಜನಾಧಿಕಾರಿ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಸ್ತೆಗಳ ಅಗಲೀಕರಣ, ಕೆರೆಗಳ ಮುಚ್ಚುವಿಕೆ, ಕಾಡಿನ ನಾಶ ಇದೇ ರೀತಿ ಪ್ರಕೃತಿ ನಾಶವಾಗುತ್ತಿದೆ. ಪ್ರಾಣಿ ಸಂಕುಲ ಮನುಷ್ಯ ಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಬೇಕಾದರೆ ಪ್ರತಿಯೊಬ್ಬರು ಗಿಡ ನೆಟ್ಟು ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ ಎಂದರು.ಕೃಷಿ ಮೇಲ್ವಿಚಾರಕ ಪ್ರವೀಣ್ ಮಾತನಾಡಿ, ಪರಿಸರ ಅಥವಾ ಭೂಮಿಗೆ ಸವಾಲಾಗಿರುವ ಹವಾಮಾನ ಬದಲಾವಣೆ, ಪ್ಲಾಸ್ಟಿಕ್ ನಂತಹ ಗಂಭೀರ ಸಮಸ್ಯೆಗಳ ಬಗ್ಗೆ ನಾವು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದೆ. ನಮ್ಮ ಮಕ್ಕಳಿಗೆ ಇಂದಿನಿಂದಲೆ ಪರಿಸರ ಮಾಲಿನ್ಯ, ಪ್ಲಾಸ್ಟಿಕ್ ಬಳಕೆ, ಪರಿಸರ ಸ್ವಚ್ಛತೆಯ ಜಾಗೃತಿ ಮೂಡಿಸಿ ವಿಶ್ವ ಪರಿಸರ ದಿನಕ್ಕೆ ತಮ್ಮದೇ ಕೊಡುಗೆ ನೀಡಬಹುದು ಎಂದರು.
ಶಾಲಾ ಮಕ್ಕಳಿಗೆ ಪರಿಸರ ಕಾರ್ಯಕ್ರಮ ಕುರಿತು ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ವಿವಿಧ ಜಾತಿ ಎಲೆಗಳ ಗುರುತಿಸುವಿಕೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆ ಮುಖ್ಯ ಶಿಕ್ಷಕ ರಮೇಶ್, ಸಹ ಶಿಕ್ಷಕ ಸುಷ್ಮ, ರುಕ್ಮಿಣಿ ವೆಂಕಟೇಶ್, ರಶ್ಮಿ, ಸೇರಿದಂತೆ ವಲಯದ ಸೇವಾ ಪ್ರತಿನಿಧಿಗಳು ಶಾಲಾ ಮಕ್ಕಳಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))