ಸಾರಾಂಶ
ಕನ್ನಡಪ್ರಭ ವಾರ್ತೆ ಬೀದರ್‌ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವುದು ನಮ್ಮ ಗುರಿ ಹಿನ್ನೆಲೆಯಲ್ಲಿ ಮುತುವರ್ಜಿ ವಹಿಸಿ ಈ ಬಾರಿ 50 ಸಾವಿರ ಮನೆ ಮಂಜೂರು ಮಾಡಿಸಿದ್ದೇನೆ. ಇನ್ನೂ ಹೆಚ್ಚಿನ ಮನೆಗಳನ್ನು ಒದಗಿಸುವಂತೆ ಕೇಂದ್ರ ವಸತಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದರು.ಭಾಲ್ಕಿ ತಾಲ್ಲೂಕಿನ ಲಂಜವಾಡ ಗ್ರಾಮದಲ್ಲಿ ಮಂಗಳವಾರ ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿ.ಪಂ ಬೀದರ ‘ಆವಾಸ್ ಪ್ಲಸ್ 2024 ಆ್ಯಪ್ ಮೂಲಕ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ಚಾಲನೆ’ ಹಾಗೂ ವಸತಿ ‘ನಿವೇಶನ ಸೌಲಭ್ಯ ಪಡೆಯುವ ಸುವರ್ಣಾವಕಾಶ’ ಮತ್ತು ಡಾ. ಬಿ.ಆರ್. ಅಂಬೇಡ್ಕರ್, ಬಸವ ವಸತಿ ಯೋಜನೆ ಫಲಾನುಭವಿಗಳಿಗೆ ತಿಳುವಳಿ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ಭಾಲ್ಕಿಯನ್ನು ಗುಡಿಸಲು ಮುಕ್ತ ಮಾಡಲು ತಂದೆಯವರಾದ ಈಶ್ವರ್ ಖಂಡ್ರೆ ಅವರು 25 ಸಾವಿರ ಮನೆ ಮಂಜೂರು ಮಾಡಿಸಿದ್ದರು ಎಂದು ಹೇಳಿದರು.ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ವಸತಿ ರಹಿತರಿಗೆ ವಸತಿ ಒದಗಿಸುವ ಉದ್ದೇಶದಿಂದ ಪ್ರದಾನಮಂತ್ರಿ ಅವಾಸ್ ವಸತಿ ಯೋಜನೆ ಗ್ರಾಮೀಣ ಅಡಿಯಲ್ಲಿ ಆವಾಸ್ ಪ್ಲಸ್ 2024 ಯ್ಯಾಪ್ ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ಈ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಯಾರಿಗೆ ಮನೆ ಇಲ್ಲವೋ ಅವರು ಈ ಆ್ಯಪ್‌ನಲ್ಲಿ ತಮ್ಮ ಮಾಹಿತಿ ಒದಗಿಸಬೇಕು ಎಂದರು. ಈಗಾಗಲೇ ಲಂಜವಾಡ ಗ್ರಾಮ ಪಂಚಾಯತಿಯ ಸೋಂಪುರ್ ಗ್ರಾಮದ ಫಲಾನುಭವಿಯಾದ ಗಾಯಬಾಯಿ ಆನಂದಗೀರಿಯವರ ಮಾಹಿತಿಯನ್ನು ಆವಾಸ್ ಫ್ಲಸ್ ಆ್ಯಪ್‌ನಲ್ಲಿ ಸೇರಿಸಲಾಗಿದೆ. ಇವರು ಈ ಆವಾಸ್ ಫ್ಲಸ್ ಆ್ಯಪ್‌ನಲ್ಲಿ ಸೇರಿಸಲಾದ ಜಿಲ್ಲೆಯ ಮೊದಲ ಫಲಾನುಭವಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಲಂಜವಾಡ ಗ್ರಾಮದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ಜಿ.ಪಂ ಸಿಇಓ ಡಾ. ಗಿರೀಶ್ ಬದೋಲೆ ಮಾತನಾಡಿ, ಸಂಸದರಾದ ಸಾಗರ ಖಂಡ್ರೆ ಅವರು ಹೆಚ್ಚು ಮುತ್ತುವರ್ಜಿ ವಹಿಸಿ ಈ ಬಾರಿ 40 ಸಾವಿರಕ್ಕೂ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಿಸಿದ್ದಾರೆ. ಅದೇ ರೀತಿ ಬಸವ ವಸತಿ ಯೋಜನೆಯಡಿ 758 ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ 1000 ಸಾವಿರ ಮನೆಗಳು ಮಂಜೂರಾಗಿವೆ ಎಂದರು.ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಬಸವ ವಸತಿ ಯೋಜನೆಯಡಿ ಆಯ್ಕೆಯಾದ 91 ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಣೆ ಮಾಡಲಾಯಿತು. ಹಾಗೂ ಆವಾಸ್ ಪ್ಲಸ್ ಆ್ಯಪ್ 2024 ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಿಕಾ ಶುಕ್ರಚಾರ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಭಾಲ್ಕಿ ತಾಲೂಕು ಅಧ್ಯಕ್ಷ ಹಣಮಂತ ಚೌವ್ಹಾಣ, ಜಿ.ಪಂ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ಭಾಲ್ಕಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಭಾಲ್ಕಿ ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೆರೆ, ಭಾಲ್ಕಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪಿ. ಎಂ ಮಲ್ಲಿಕಾರ್ಜುನ, ಭಾಲ್ಕಿ ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಕಾಮರಾಯ ಜಗ್ಗಿನವರ, ಕಾರ್ಮಿಕ ನಿರೀಕ್ಷಕ ಮಂಜುನಾಥ ಹದಗುಂಡಿ, ಮೈನಾರಟಿ ಅಧಿಕಾರಿ, ತೋಟಗಾರಿಕೆ ಎಸ್.ಡಿ.ಎಚ್ ಮಾರುತಿ ಲಂಜವಾಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವದೀಪ, ಲಂಜವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಸೂರ್ಯಕಾಂತ್ ಅಹ್ಮದಾಬಾದೆ, ರಾಜಕುಮಾರ, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.