ನಮ್ಮ ‘ಗ್ಯಾರಂಟಿ’ ಜನರ ಮೇಲೆ ಪ್ರಭಾವ ಬೀರಿದೆ: ಮಧು ಬಂಗಾರಪ್ಪ

| Published : Apr 21 2024, 02:16 AM IST

ನಮ್ಮ ‘ಗ್ಯಾರಂಟಿ’ ಜನರ ಮೇಲೆ ಪ್ರಭಾವ ಬೀರಿದೆ: ಮಧು ಬಂಗಾರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಸಿನಿಮಾದೋರು ಮುಖಕ್ಕೆ ಬಣ್ಣಹಚ್ಚಿ ಕೊಂಡರೆ, ಈಶ್ವರಪ್ಪ ನಾಲಗೆಗೆ ಬಣ್ಣಹಚ್ಚಿಕೊಂಡು ಮಾತನಾಡುತ್ತಾರೆ. ಈಶ್ವರಪ್ಪ ನಾಲಾಯಕ್ಕು. ಮಹಿಳೆ ಸೇರಿದಂತೆ ಯಾರ ಬಗ್ಗೆಯೂ ಅವರಿಗೆ ಗೌರವ ಇಲ್ಲ. ಅವರ ಹೇಳಿಕೆಗಳಿಗೆ ಉತ್ತರಿಸುವುದು ವ್ಯರ್ಥ ಎಂದು ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಮತದಾರರಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳು ನಂಬಿಕೆಗೆ ಸಾಕ್ಷಿಯಾಗಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿ ಮನೆಮನೆಗಳಿಗೆ ತೆರಳಿ ಗ್ಯಾರಂಟಿ ಕಾರ್ಡ್‌ಗಳನ್ನು ನೀಡಿ ಮತಯಾಚಿಸಲಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.ಅವರು ಶನಿವಾರ ಶಾಸಕ ಬಿ.ಕೆ.ಸಂಗಮೇಶ್ವರ್ ಗೃಹ ಕಛೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗ್ಯಾರಂಟಿ ಕಾರ್ಡ್‌ಗಳು ಬಿಡುಗಡೆಗೊಳಿಸಿ ಮಾತನಾಡಿದರು.ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಮೇಲೆ ಪ್ರಭಾವ ಬೀರಿವೆ. ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡುವವರು ನಾವಲ್ಲ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿದೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರ ಮನೆಗಳಿಗೂ ತಲುಪಿವೆ ಎಂಬ ವಿಶ್ವಾಸವಿದೆ ಎಂದರು.

ಮತದಾರರಿಗೆ ಬಿಜೆಪಿ ಪಕ್ಷದವರ ನಾಟಕದ ಅರಿವಾಗಿದೆ. ಕಾಂಗ್ರೆಸ್ಸಿನವರಿಗೆ ಗ್ಯಾರಂಟಿ ಯೋಜನೆಯಿಂದ ಮತ ಕೇಳುವ ಹಕ್ಕು ಬಂದಂತಾಗಿದೆ. ಜನರು ಈ ಬಾರಿ ಬದಲಾವಣೆ ಬಯಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಬಂದಂತಾಗಿದೆ. ಬಿಜೆಪಿಯಿಂದ ಮೋಸ ಹೋಗಿದ್ದೇವೆ ಎಂದು ಮತದಾರರಿಗೆ ತಿಳಿದಿದೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಗೆಲುವು ಸುಲಭವಾಗಲಿದೆ ಎಂದರು.

1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸರ್ಕಾರ ವಿವಿಧ ಯೋಜನೆಗಳಿಂದ 9-10 ಕೋಟಿಯಷ್ಟು ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಗಳ ಸಮರ್ಪಕ ಬಳಕೆಯಿಂದ ಬಹಳಷ್ಟು ಬಡ ಕುಟುಂಬಗಳಿಗೆ ನೆರವಾಗಲು ಸಾಧ್ಯವಿದೆ ಎಂದರು.

ಬಿಜೆಪಿ ಪಕ್ಷದವರು ಶೇ.26ರಷ್ಟು ಜನರನ್ನು ಮಾತ್ರ ಅಭಿವೃದ್ಧಿಪಡಿಸಿ, ಉಳಿದವರನ್ನು ಬಡವರನ್ನಾಗಿಸಿದ್ದಾರೆ. ಬಿಜೆಪಿ ಸರ್ಕಾರದ ಸಾಲಮನ್ನಾ ಸಹ ಶ್ರೀಮಂತರ ಪರವಾಗಿಯೇ ಇದೆ ಎಂದು ದೂರಿದರು.ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ. ನಾವು ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಪಕ್ಷದ ಮುಖಂಡರು ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿ, ರಾಜ್ಯ ಹಾಗೂ ದೇಶದ ಜನತೆಗೆ ತಪ್ಪಿನ ಅರಿವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ. ಭದ್ರಾವತಿಯ ಜನತೆ ಗೀತಾ ಗೆಲುವಿಗಾಗಿ ಹೆಚ್ಚಿನ ಮತ ನೀಡಿ ಸಹಕರಿಸುವಂತೆ ಕೋರಿದರು.ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಸ್.ಕುಮಾರ್ ಎಚ್.ಎಲ್.ಷಡಕ್ಷರಿ, ಎಸ್.ಮಣಿಶೇಖರ್, ಕಲಗೋಡು ರತ್ನಾಕರ್, ಬಿ.ಕೆ.ಮೋಹನ್, ಬಲ್ಕೀಶ್ ಬಾನು, ವೈ.ರೇಣುಕಮ್ಮ,ಚನ್ನಪ್ಪ, ಮಣಿ, ಕಾಂತರಾಜ್, ಬಷೀರ್ ಅಹಮದ್, ಸುದೀಪ್ ಕುಮಾರ್, ಸಿ.ಜಯಪ್ಪ, ಎಂ. ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.