ಸಾರಾಂಶ
ಸನ್ಮಾನ ಸ್ವೀಕಾರದಲ್ಲಿ ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿ, ಈ ಮಹತ್ವದ ಜವಾಬ್ದಾರಿಯನ್ನು ಎಲ್ಲರ ಮಾರ್ಗದರ್ಶನ, ಸಲಹೆ ಸೂಚನೆಗಳೊಂದಿಗೆ ಸಮರ್ಥವಾಗಿ ನಿಭಾಯಿಸುವೆ ಎಂದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಭಾರತೀಯ ಜನತಾ ಪಕ್ಷ ನನ್ನ ಉಸಿರು, ಎಲ್ಲ ಕಾರ್ಯಕರ್ತ ಬಂಧುಗಳ ಆಶೀರ್ವಾದ, ಮುಖಂಡರ ಮಾರ್ಗದರ್ಶನ ಫಲವಾಗಿ ನನಗೆ ನೂತನ ಜವಾಬ್ದಾರಿ ದೊರಕಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಎಸ್ಸಿ ಮೋರ್ಚಾದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಮಹತ್ವದ ಜವಾಬ್ದಾರಿಯನ್ನು ಎಲ್ಲರ ಮಾರ್ಗದರ್ಶನ, ಸಲಹೆ ಸೂಚನೆಗಳೊಂದಿಗೆ ಸಮರ್ಥವಾಗಿ ನಿಭಾಯಿಸುವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಆಡಳಿತ ಅವಧಿಯಲ್ಲಿ ಅನೇಕ ಮಹತ್ವದ ಅಭಿವೃದ್ಧಿ ಯೋಜನೆಗಳು ಕಾರ್ಯಗತಗೊಂಡಿವೆ. ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯಾಗಿಸುವ ಸಂಕಲ್ಪವನ್ನು ಪ್ರತಿ ಕಾರ್ಯಕರ್ತರು ಸ್ವೀಕರಿಸಬೇಕು. ಪಕ್ಷ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಧ್ಯೆಯವಾಗಿದೆ ಎಂದು ತಿಳಿಸಿದರು.ಎಲ್ಲ ವರ್ಗಗಳ ಹಿತರಕ್ಷಣೆಗೆ ಮೋದಿ ಸರ್ಕಾರ ಬದ್ಧತೆ ಪ್ರದರ್ಶಿಸಿದೆ. ನೈಜ ಜನಕಳಕಳಿಯ ಬಿಜೆಪಿ ಪಕ್ಷ ಮತ್ತೊಮ್ಮೆ ಗೆಲುವಿನ ನಗೆ ಬೀರಲು ಶಕ್ತಿ ಮೀರಿ ಪ್ರಯತ್ನಿಸೋಣ ಎಂದು ಕೋರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ವಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ಮಳುಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಜೋಗೂರ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ಶಿಲ್ಪಾ ಕುದರಗೊಂಡ, ಸಂದೀಪ ಪಾಟೀಲ,ಬಸವರಾಜ ಹೂಗಾರ, ವಿಠ್ಠಲ ನಡುವಿನಕೇರಿ, ಕೃಷ್ಣಾ ಗುನ್ನಾಳಕರ, ಪ್ರಮೋದ ಬಡಿಗೇರ, ರಾಜೇಶ ತಾವಸೇ, ಶ್ರೀಧರ ಬಿಜ್ಜರಗಿ ಮುಂತಾದವರು ಇದ್ದರು.