ಕಾರಟಗಿ : ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮದು - ತಹಸೀಲ್ದಾರ್ ಎಂ. ಕುಮಾರಸ್ವಾಮಿ

| N/A | Published : Jan 27 2025, 12:49 AM IST / Updated: Jan 27 2025, 12:43 PM IST

ಕಾರಟಗಿ : ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮದು - ತಹಸೀಲ್ದಾರ್ ಎಂ. ಕುಮಾರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

 ಪ್ರಜಾಪ್ರಭುತ್ವ ವ್ಯವಸ್ಥೆಯು ಇಡೀ ಜಗತ್ತಿಗೆ ಮಾದರಿ. ಎಂತಹ ಸವಾಲುಗಳು ಬಂದರೂ ಅವುಗಳನ್ನು ಎದುರಿಸಿ ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯ ನೆಲೆಗಟ್ಟು ಭದ್ರವಾಗಿ ನಿಂತಿದೆ. ವಿಶ್ವದಲ್ಲಿಯೇ ನಮ್ಮದು ಸರ್ವಶ್ರೇಷ್ಠ ಸಂವಿಧಾನ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.

  ಕಾರಟಗಿ : ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ಇಡೀ ಜಗತ್ತಿಗೆ ಮಾದರಿ. ಎಂತಹ ಸವಾಲುಗಳು ಬಂದರೂ ಅವುಗಳನ್ನು ಎದುರಿಸಿ ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯ ನೆಲೆಗಟ್ಟು ಭದ್ರವಾಗಿ ನಿಂತಿದೆ. ವಿಶ್ವದಲ್ಲಿಯೇ ನಮ್ಮದು ಸರ್ವಶ್ರೇಷ್ಠ ಸಂವಿಧಾನ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.

ಇಲ್ಲಿನ ಸಿದ್ದೇಶ್ವರ ರಂಗ ಮಂದಿರದಲ್ಲಿ ಭಾನುವಾರ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮಂಗಲ ಪಾಂಡೆ, ನೇತಾಜಿ ಸುಭಾಷಚಂದ್ರ ಭೋಸ್, ಭಗತ್‌ಸಿಂಗ್, ಮಹಾತ್ಮಾ ಗಾಂಧೀಜಿ, ಸರ್ದಾರ್ ವಲ್ಲಬ್ ಬಾಯ್ ಪಟೇಲ್ ಸೇರಿದಂತೆ ಇನ್ನೂ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ೧೯೪೭ರ ಆ. ೧೫ರಂದು ನಮ್ಮ ದೇಶ ಸ್ವಾತಂತ್ರ್ಯ ಕಂಡಿತು. ಬಳಿಕ ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಅವಿರತ ಪರಿಶ್ರಮದ ಫಲವಾಗಿ ೧೯೫೦ರ ಜ. ೨೬ರಂದು ಭಾರತದ ಆಡಳಿತಕ್ಕೆ ಕೈಗನ್ನಡಿಯಾಗಿರುವ ಭಾರತದ ಸಂವಿಧಾನ ಅಂಗೀಕರಿಸಲಾಯಿತು. ಈ ದಿನವನ್ನು ನಾವು ಗಣರಾಜ್ಯ ದಿನವನ್ನಾಗಿ ಆಚರಿಸುತ್ತಾ ಬಂದಿದ್ದೇವೆ ಎಂದರು.

ನಮ್ಮ ಸಂವಿಧಾನವು ವಿಶ್ವದ ಬೃಹತ್ ಸಂವಿಧಾನವಾಗಿದ್ದು, ೪೪೮ ವಿಧಿಗಳು, ೧೨ ಪರಿಚ್ಛೇಧಗಳು, ೧೦೩ಕ್ಕೂ ಹೆಚ್ಚು ಬಾರಿ ತಿದ್ದುಪಡಿಗಳನ್ನು ಒಳಗೊಂಡ ಸಂವಿಧಾನವಾಗಿರುತ್ತದೆ. ಇದಕ್ಕೆ ಸಂವಿಧಾನದ ಅಡಿಪಾಯ ಹಾಕಿದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ನಾವೆಲ್ಲರೂ ಚಿರಋಣಿಗಳಾಗಿರಬೇಕು ಎಂದು ಹೇಳಿದರು.

ಈ ಮುಂಚೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿರಲಿಲ್ಲ. ಮೊದಲು ಪರಕೀಯರ ಆಡಳಿತ ಹಾಗೂ ರಾಜಮನೆತನಗಳು ಆಡಳಿತ ನಡೆಸುತ್ತಿದ್ದವು. ಎಲ್ಲವನ್ನು ಒಟ್ಟುಗೂಡಿಸಿ ಗಣರಾಜ್ಯವನ್ನಾಗಿ ಮಾಡಲಾಯಿತು. ಇಂದು ನಮಗೆ ನಾವೇ ಶಕ್ತಿ ಕೊಟ್ಟುಕೊಂಡ ಮಹಾದಿನ. ಇದನ್ನು ನಾವೆಲ್ಲರೂ ಬಹಳ ಸಂಭ್ರಮದಿಂದ ಆಚರಿಸಬೇಕು. ದೇಶದ ಆರ್ಥಿಕ ಪ್ರಗತಿಗೆ ಯುವ ಸಮುದಾಯ ಮುಂದಾಗಬೇಕು. ನಾಡು, ನುಡಿ, ದೇಶದ ವಿಚಾರದಲ್ಲಿ ಸ್ವಂತಿಕೆಯನ್ನು ನಾವು ಮರೆಯಬಾರದು ಎಂದರು.

ತಾಪಂ ಇಒ ಲಕ್ಷ್ಮೀದೇವಿ, ಪುರಸಭೆ ಮುಖ್ಯಾಧಿಕಾರಿ ಸುರೇಶ್ ಶೆಟ್ಟರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ವಿಜೇತ ಮಕ್ಕಳನ್ನು ತಾಲೂಕಾಡಳಿತದಿಂದ ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ನಡೆದ ಪಥಸಂಚಲನದಲ್ಲಿ ತಹಸೀಲ್ದಾರ್ ಗೌರವ ವಂದನೆ ಸ್ವೀಕರಿಸಿದರು.

ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೊಸೂರು, ಉಪಾಧ್ಯಕ್ಷೆ ದೇವಮ್ಮ ಗಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಈಶಪ್ಪ ಇಟ್ಟಂಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಉಪಾದ್‌ಯಕ್ಷ ನಾಗರಾಜ ಅರಳಿ ಪಿಐ ಸುಧೀರ್ ಬೆಂಕಿ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹನುಮಂತಪ್ಪ ತೊಂಡಿಹಾಳ, ಮುಖಂಡರಾದ ಬಸವರಾಜ ಗುಂಡೂರು, ಅಯ್ಯಪ್ಪ ಉಪ್ಪಾರ, ಶರಣಪ್ಪ ಪರಕಿ ಸೇರಿ ಇತರರಿದ್ದರು.