ಸಾರಾಂಶ
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜೇನುಹುಳುಗಳು ಏಕಾಏಕಿ ವಿದ್ಯಾರ್ಥಿಗಳ ಮೆಲೆ ದಾಳಿ ನಡೆಸಿದೆ. 
ಕನ್ನಡಪ್ರಭ ವಾರ್ತೆ ವಿರಾಜಪೇಟೆ
ವಿರಾಜಪೇಟೆ ನಗರದ ಚಿಕ್ಕಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಮೀಪದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜೇನು ಹುಳುಗಳು ಏಕಾಏಕಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದೆ.ಮುಂಜಾನೆ 9:30ರ ಸಮಯದಲ್ಲಿ ವಿದ್ಯಾರ್ಥಿಗಳು ಎಂದಿನಂತೆ ಶಾಲಾ ಪ್ರಾರ್ಥನೆ ಮುಗಿಸಿ ಶಾಲೆಯಲ್ಲಿ ನೀಡಲಾಗುವ ಹಾಲನ್ನು ಕುಡಿಯಲು ಬಂದಾಗ ಎಲ್ಲಿಂದಲೋ ಹಾರಿಬಂದ ಜೇನು ಹುಳುಗಳು ದಾಳಿ ನಡೆಸಿದೆ.
ತಕ್ಷಣ ಎಚ್ಚೆತ್ತುಕೊಂಡ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಜೇನುಹುಳು ದಾಳಿಯಿಂದ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಸುಮಾರು 30 ವಿದ್ಯಾರ್ಥಿಗಳಿಗೆ ಜೇನು ಹುಳುಗಳು ಕಚ್ಚಿದೆ. ವಿದ್ಯಾರ್ಥಿಗಳ ರಕ್ಷಣೆ ಮಾಡಿದ ಶಿಕ್ಷಕರಿಗೂ ಜೇನು ಹುಳುಗಳು ಕಚ್ಚಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಶಿಕ್ಷಕರು ವಿದ್ಯಾರ್ಥಿಗಳನ್ನು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ನೀಡಿದ್ದು ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಪ್ರಮೋದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
;Resize=(128,128))
;Resize=(128,128))