ಸಾರಾಂಶ
ಶಿರಾ: ನಗರದ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಸರ್ವೆ ನಡೆಸಲಾಗಿದೆ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಅವರು ಮದಲೂರು ದಾಸರಹಳ್ಳಿ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಬೈಪಾಸ್ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು. ಶಿರಾ ತಾಲೂಕಿನ ರಸ್ತೆ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ 30 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು ಹಾಗೂ ಶಿರಾದಿಂದ ಅಮರಾವತಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ, ಕೊಟ್ಟಗೇಟ್ ನಿಂದ ಹುಲಿಕುಂಟೆ ಗೇಟ್ ವರೆಗೂ ರಸ್ತೆ ಕಾಮಗಾರಿ ಶೀಘ್ರವಾಗಿ ಆರಂಭವಾಗಲಿದೆ ಎಂದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜೀಷಾನ್ ಮಹಮೂದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಶಿವಕುಮಾರ್, ಸಹಾಯಕ ಇಂಜಿನಿಯರ್ ಮೃತ್ಯುಂಜಯ, ವ್ಯವಸ್ಥಾಪಕ ಹನುಮಂತಯ್ಯ ಮುಖಂಡರಾದ ಡಿ.ಸಿ.ಅಶೋಕ್, ವಾಜರಹಳ್ಳಿ ರಮೇಶ್, ಸುಧಾಕರ್, ಮಣಿಕಂಠ, ತಿಪ್ಪೇಸ್ವಾಮಿ, ರಂಗನಾಥ್ ಸೇರಿದಂತೆ ಹಲವರು ಹಾಜರಿದ್ದರು.