ಚಿಕ್ಕೋಡಿಯಲ್ಲಿ ರಸ್ತೆ ತಡೆದು ಆಕ್ರೋಶ

| Published : Aug 23 2024, 01:14 AM IST

ಸಾರಾಂಶ

ಚಿಕ್ಕೋಡಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಹೊರಟ ಬಿಜೆಪಿ ಕಾರ್ಯಕರ್ತರು ಬಸವಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ ನೇತೃತ್ವದಲ್ಲಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.

ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ವ್ಯಕ್ತಿಗಳು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಅನುಮತಿ ನೀಡಿದ ಕೂಡಲೇ ರಾಜ್ಯಪಾಲರ ವಿರುದ್ಧ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರುಮಹಾಗೂ ಬೆಂಬಲಿಗರು ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ವೈಯುಕ್ತಿಕವಾಗಿ ತೇಜೋವಧೆ ಮಾಡುತ್ತಿರುವುದು ಖಂಡನೀಯ. ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮೂಲಕ ಆಗ್ರಹಿಸಿದ್ದಾರೆ.

ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮೃತ ಕುಲಕರ್ಣಿ, ಶಿವಾನಂದ ನವಿನಾಳೆ, ಸದಾನಂದ ಹಳಿಂಗಳೆ, ಜಿಲ್ಲಾ ಖಜಾಂಚಿ ಅಭಯ ಮಾನವಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಜಕುಮಾರ ಹರಗನ್ನವರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸಂಜಯ ಪಾಟೀಲ, ಬಸವರಾಜ ಡೋಣವಾಡೆ, ಶ್ರೀಶೈಲ ಯಮಕನಮರಡಿ, ಅಪ್ಪಯ್ಯ ಜಾಜರಿ, ಪವನ ಮಹಾಜನ, ಪೃಥ್ವಿರಾಜ ಜಾಧವ, ಡಾ.ರವಿ ಸಂಕ, ಸಿದ್ದು ನರುಟೆ, ರಮೇಶ ಕಾಳನ್ನವರ, ಬಾಬಾಸಾಹೇಬ ಕೆಂಚನ್ನವರ, ದೀಪಕ ಪಾಟೀಲ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.