ಯಲಬುರ್ಗಾದಲ್ಲಿ ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ

| Published : Dec 13 2024, 12:48 AM IST

ಸಾರಾಂಶ

೨ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಗುರುವಾರ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಹತ್ತಿರ ತಾಲೂಕಾ ಪಂಚಮಸಾಲಿ ಸಮುದಾಯದವರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಬೆಳಗಾವಿಯಲ್ಲಿ ೨ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಗುರುವಾರ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಹತ್ತಿರ ತಾಲೂಕಾ ಪಂಚಮಸಾಲಿ ಸಮುದಾಯದವರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಮಾಜದ ಮುಖಂಡರಾದ ವೀರಣ್ಣ ಹುಬ್ಬಳ್ಳಿ, ಬಸವಲಿಂಗಪ್ಪ ಭೂತೆ, ಸಿ.ಎಚ್. ಪಾಟೀಲ ಮಾತನಾಡಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ೨ಎ ಮೀಸಲಾತಿಗಾಗಿ ಶಾಂತಿಯುತವಾಗಿ ನಡೆಸುತ್ತಿದ್ದ ಸಾಕಷ್ಟು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ನಮ್ಮ ಸಮುದಾಯದ ಒಗ್ಗಟ್ಟನ್ನು ಹೊಡೆಯುವ ಹುನ್ನಾರ ಇದಾಗಿದೆ ಎಂದರು.

ಮಾಜಿ ಸಚಿವ ಹಾಲಪ್ಪ ಬೆಂಬಲ:ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹಾಲಪ್ಪ ಆಚಾರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಪ್ರವರ್ಗ ೨ಬಿಯಲ್ಲಿ ನೀಡಿದ್ದ ಶೇ.೪ರಷ್ಟು ಮೀಸಲಾತಿಯನ್ನು ಕಾನೂನಾತ್ಮಕವಾಗಿ ಪ್ರವರ್ಗ ೩ಸಿ ಮತ್ತು ೩ಡಿ ಮಾಡಿ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಹಂಚಿಕೆ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದನ್ನು ತಿರುಚುವ ಮೂಲಕ ಸಮುದಾಯದವರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವಂಥದ್ದಲ್ಲ. ಈ ಸಮಾಜಕ್ಕೆ ೨ಎ ಮೀಸಲಾತಿ ಸಿಗುವವರೆಗೊ ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

ವಕೀಲರ ಸಂಘದ ತಾಲೂಕಾಧ್ಯಕ್ಷ ಪ್ರಕಾಶ ಬೇಲೇರಿ, ವಕೀಲ ರಾಜಶೇಖರ ನಿಂಗೋಜಿ, ಸುರೇಶಗೌಡ ಶಿವನಗೌಡ್ರ, ದಾನನಗೌಡ ತೊಂಡಿಹಾಳ, ಆನಂದ ಉಳ್ಳಾಗಡ್ಡಿ, ಬಸವರಾಜ ಗುಳಗುಳಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಸಮಾಜ ತಾಲೂಕಾಧ್ಯಕ್ಷ ಕೆ.ಜಿ. ಪಲ್ಲೇದ, ಅಂದಾನಗೌಡ ಉಳ್ಳಾಗಡ್ಡಿ, ಶರಣಪ್ಪ ರಾಂಪೂರ, ರುದ್ರಗೌಡ ಸೋಲಬನಗೌಡ್ರ, ಸಿದ್ದರಾಮೇಶ ಬೇಲೇರಿ, ಶೇಖರಗೌಡ ಚಿಕ್ಕೊಪ್ಪ, ವೀರಣ್ಣ ಉಳ್ಳಾಗಡ್ಡಿ, ಶರಣಪ್ಪ ಗಾಂಜಿ, ಎಸ್.ಎನ್. ಶ್ಯಾಗೋಟಿ, ಅಮರೇಶ ಹುಬ್ಬಳ್ಳಿ, ಕಲ್ಲೇಶ ಕರಮುಡಿ, ಶರಣಪ್ಪ ಅರಕೇರಿ, ಬಸವರಾಜ ಅಧಿಕಾರಿ, ವೀರನಗೌಡ ಬನ್ನಪ್ಪಗೌಡ್ರ, ಸಂಗಪ್ಪ ರಾಮತಾಳ, ಶಿವಕುಮಾರ ನಾಗನಗೌಡ್ರ, ಬಸವಲಿಂಗಪ್ಪ ಕೊತ್ತಲ, ರೇಣುಕಪ್ಪ ಬಂಡ್ರಿ, ಕೆ.ಎನ್. ಮುಳಗುಂದ, ಮಂಜುನಾಥ ಅಧಿಕಾರಿ, ಅಶೋಕ ಅರಕೇರಿ,ಈಶಪ್ಪ, ಬಸವರಾಜ ಬನ್ನಿಗೋಳ, ಮಂಜು ಬೇಲೇರಿ ಮತ್ತಿತರರು ಇದ್ದರು.