Outrage over FIR against Rahul
ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಕನ್ನಡಪ್ರಭ ವಾರ್ತೆ ದಾವಣಗೆರೆ
ಲೋಕಸಭೆ ಪ್ರತಿಪಕ್ಷ ನಾಯಕ, ಎಐಸಿಸಿ ನಾಯಕ ರಾಹುಲ್ ಗಾಂಧಿ ಮೇಲೆ ರಾಜಕೀಯ ದ್ವೇಷದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ನಿಂದ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ರಾಹುಲ್ ಗಾಂಧಿ ಮೇಲೆ ರಾಜಕೀಯ ದ್ವೇಷದಿಂದ ದಾಖಲಾದ ಎಫ್ಐಆರ್ ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.
ಇದೇ ವೇಳೆ ಮಾತನಾಡಿದ ದಿನೇಶ. ಕೆ.ಶೆಟ್ಟಿ, ಉತ್ತರಾಖಂಡದ ಹಲದ್ವಾನಿಯಲ್ಲಿ ಈಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಯೊಂದರಲ್ಲಿ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮ ಮುಗಿದ ನಂತರ ಶುದ್ಧೀಕರಣದ ಹೆಸರಿನಲ್ಲಿ ಕಿಡಿಗೇಡಿಗಳು ಸ್ವಚ್ಛಗೊಳಿಸಿದ್ದರು. ಶುದ್ಧೀಕರಣದ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಖಂಡಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದರು.ರಾಹುಲ್ ಗಾಂಧಿ ಮೇಲಿನ ರಾಜಕೀಯ ದ್ವೇಷದಿಂದ ದುರುದ್ದೇಶದಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ನಡೆಯುತ್ತಿರುವ ಹೋರಾಟ ಇದಾಗಿದೆ. ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಹತ್ತಿಕ್ಕಲು ಹೀಗೆ ಎಫ್ಐಆರ್ ದಾಖಲಿಸುವ ಕೆಲಸ ನಡೆದಿದೆ ಎಂದು ಅವರು ದೂರಿದರು.
ಪಕ್ಷದ ದಕ್ಷಿಣ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಿಳಾ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ, ಜಯಣ್ಣ, ಅರುಣ್ ಬೆಣ್ಣೆಹಳ್ಳಿ, ಅಲಿ ರೆಹಮತ್, ಕೆ.ಪಿ.ರಾಜೇಶ್ವರಿ, ಮಂಜಮ್ಮ, ರಾಜೇಶ್ವರಿ, ಟಿ.ರಮೇಶ, ಗಾಂಧಿ ನಗರ ಜಿ.ರಾಕೇಶ, ಎಲ್.ಎಂ.ಎಚ್.ಸಾಗರ್, ಮುಜಾಹಿದ್ ಪಾಶಾ ಇದ್ದರು.ಫೋಟೊ ಬೇಡ...
ಎಐಸಿಸಿ ನಾಯಕ ರಾಹುಲ್ ಗಾಂಧಿ ಮೇಲೆ ಎಫ್ಐಆರ್ ದಾಖಲಿಸಿದ್ದನ್ನು ಖಂಡಿಸಿ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟಿಸಲಾಯಿತು.