ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಆಕ್ರೋಶ

| Published : Jan 08 2025, 12:19 AM IST

ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡುವುದರ ಮೂಲಕ ಬಡ, ಕೂಲಿ ಕಾರ್ಮಿಕರು, ಜನತೆಗೆ ಹೊರೆಯನ್ನು ಹೇರಿದಂತಾಗಿದೆ. ಸರ್ಕಾರದ ಬಸ್‌ಗಳನ್ನೇ ಅವಲಂಬಿಸಿ ಸಾವಿರಾರು ಜನ ನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಾರೆ. ಆದರೆ, ಬಸ್ ದರ ಹೆಚ್ಚಳ ಮಾಡುವುದರ ಮೂಲಕ ಆರ್ಥಿಕ ಹೊರೆಯನ್ನು ಜನಸಾಮಾನ್ಯರ ಮೇಲೆ ಸರ್ಕಾರ ಹಾಕುತ್ತಿದೆ ಎಂದು ದೂರಿದರು.ಶಕ್ತಿ ಯೋಜನೆಯಿಂದಾಗಿ ನಿತ್ಯ ಬಸ್‌ಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದು ಸರ್ಕಾರದ ಗಮನಕ್ಕಿದೆ. ಆದರೆ, ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳ ಶಾಲಾ, ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಹಲವಾರು ಬಸ್‌ಗಳಲ್ಲಿ ಸ್ಥಳಾವಕಾಶ ಇಲ್ಲದೆ ಬಸ್‌ಗಳನ್ನು ನಿಲ್ಲಿಸದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಸರ್ಕಾರ ಕೂಡಲೇ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಿ ವಿದ್ಯಾರ್ಥಿಗಳ ಹಾಗೂ ಜನಸಾಮಾನ್ಯರ ಪ್ರಯಾಣಕ್ಕೆ ಅನುಕೂಲ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.ನಂತರ ತಹಸೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಪುಲ್ ಪೇಟ್ಕರ್, ಹನಮಂತ ಹಳ್ಳೂರ, ವೈಭವ ಹಂದ್ರಾಳ, ಅವಿನಾಶ ಹೊಕ್ರಾಣಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.