ಸಾರಾಂಶ
ರಾಮನಗರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಹೇರಿರುವ ನಿಷೇಧದ ಆದೇಶವನ್ನು ವಾಪಸ್ಸು ಪಡೆಯುವಂತೆ ಹಾಗೂ ೩೨ ಅಂಶದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ, ದಲಿತ ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ವಿವಿಧ ಸಂಘಟನೆಗಳ ಮುಖಂಡರ ಬಂಧನದ ಮೂಲಕ ಅಂತ್ಯ ಖಂಡಿತು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆಗಳಿಗೆ ನಿಷೇಧ ಹೇರಿರುವುದನ್ನು ಖಂಡಿಸಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸಂಘಟನೆಯ ಮುಖಂಡರು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾಕಾರರು ತೆರಳದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಕಚೇರಿ ಮುಂಭಾಗದ ಬೃಹತ್ ಗೇಟ್ ಹಾಕಿ ಪೊಲೀಸ್ ಬ್ಯಾರಿಕೇಡ್‌ನಿಂದ ಬಂದ್ ಮಾಡಲಾಗಿತ್ತು. ಪ್ರತಿಭಟನೆ ನಡೆಸಲು ಆಗಮಿಸಿದ ಪ್ರತಿಭಟನಾನಿರತರನ್ನು ತಡೆಯಲಾಯಿತು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಹಳೆಯ ಬೆಂಗಳೂರು ಮೈಸೂರು ಹೆದ್ದಾರಿಯನ್ನು ತಡೆದ ರಸ್ತೆಯಲ್ಲಿ ಕುಳಿತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆಗೆ ನಿಷೇಧಿಸುವ ಮೂಲಕ ಜಿಲ್ಲಾಡಳಿತ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಈ ಕೂಡಲೇ ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಗಾಂಧಿ ಪ್ರತಿಭಟನೆ ನಡೆಸುವ ವೇಳೆ ಬ್ರಿಟಿಷರು ರಕ್ಷಣೆ ನೀಡುತ್ತಿದ್ದರು. ಆದರೆ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸದಂತೆ ಹೊರಡಿಸಿರುವ ನಿಷೇಧಾಜ್ಞೆಯು ಸಾರ್ವಧಿಕಾರ ಧೋರಣೆಯನ್ನು ಸಹ ಮೀರಿದ್ದಾಗಿದೆ. ಜಿಲ್ಲಾಧಿಕಾರಿಯು ಜಿಲ್ಲೆಯ ಮೊದಲ ಸೇವಕನಾಗಿದ್ದು, ಇದನ್ನು ಅರಿತು ಜನರ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆ ಹತ್ತಿಕ್ಕುವ ಹುನ್ನಾರ:
ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ತಾಲೂಕು ಮಟ್ಟದ ಕಚೇರಿಗಳು ಭ್ರಷ್ಟಾಚಾರದಿಂದ ಕೂಡಿದೆ. ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದೇ ಜಿಲ್ಲಾಡಳಿತ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಜಿಲ್ಲಾಡಳಿತ ಕೈಗೊಂಡಿರುವ ಈ ನಿರ್ಧಾರ ಸಂವಿಧಾನಕ್ಕೆ ಅಗೌರವ ತರುವಂತದ್ದಾಗಿದ್ದು, ಇದು ಬಾಬಾ ಸಾಹೇಬರಿಗೆ ತೋರಿದ ಅಗೌರವವಾಗಿದೆ ಎಂದು ಟೀಕಿಸಿದರು.ಪ್ರತಿಭಟನೆಗೆ ಮಳೆ ಅಡ್ಡಿ:
ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಧ್ಯಾಹ್ನ ೨ ಗಂಟೆ ವೇಳೆಗೆ ಮಳೆ ಸುರಿದ ಪ್ರತಿಭಟನೆಗೆ ಅಡ್ಡಪಡಿಸಿತು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಲು ಮುಂದಾದರು. ಈ ವೇಳೆ ಕೆಲವು ತಲ್ಲಾಟ ನೂಕಾಟ ಸಹ ನಡೆಯಿತು. ಪ್ರತಿಭಟನಾನಿತರನ್ನು ಬಂಧಿಸಿದ ಪೊಲೀಸರು ರಾಮನಗರದ ಖಾಸಗಿ ಕಲ್ಯಾಣ ಮಂಪಟದಲ್ಲಿ ಇರಿಸಿದರು. ಕೆಲ ಸಮಯದ ನಂತರ ಹೋರಾಟಗಾರರನ್ನು ಬಿಡುಗಡೆಗೊಳಿಸಲಾಯಿತು.ಬಾಕ್ಸ್.............
ಶೌಚಾಲಯದ ವಿಚಾರಕ್ಕೆ ಮಾತಿನ ಚಕಮಕಿಪ್ರತಿಭಟನೆ ನಡೆಸುವ ಶೌಚಾಲಯಕ್ಕಾಗಿ ಹೋರಾಟಗಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆಯಿತು. ಪ್ರತಿಭಟನೆ ವೇಳೆ ಮಹಿಳಾ ಸದಸ್ಯರಿಗೆ ಡಿಸಿ ಕಚೇರಿಯಲ್ಲಿನ ಶೌಚಾಲಯ ಬಳಸಲು ಅವಕಾಶ ಮಾಡಿಕೊಡಬೇಕೆಂದು ಹೋರಾಟಗಾರರು ಪೊಲೀಸರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪೊಲೀಸ್ ಸಿಬ್ಬಂದಿ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಬಾಕ್ಸ್...................ಬಿಗಿ ಪೊಲೀಸ್ ಬಂದೋಬಸ್ತ್
ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾಧಿಕಾರಿ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.ಜಿಲ್ಲಾಧಿಕಾರಿ ಕಚೇರಿ ಬಳಿ ಸುಮಾರು ೧೦೦ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನೇಮಿಸಲಾಗಿತ್ತು. ಇದರಲ್ಲಿ ಎಎಸ್ಪಿ ನೇತೃತ್ವದ ೨೦ ಪೊಲೀಸ್ ಅಧಿಕಾರಿಗಳ ತಂಡ, ೫೦ ಪೊಲೀಸ್ ಸಿಬ್ಬಂದಿ, ಎರಡು ತುಕಡಿ ಮೀಸಲು ಪೊಲೀಸ್ ತಂಡದ ಜತೆಗೆ, ೧ ಜಿಲ್ಲಾ ಪೊಲೀಸ್ ತಂಡ ನೇಮಿಸಲಾಗಿತ್ತು. ಇನ್ನು ಹೋರಾಟಗಾರರನ್ನು ಬಂಧಿಸುವ ಸಲುವಾಗಿ ಪ್ರತಿಭಟನೆ ಆರಂಭಕ್ಕೂ ಮುನ್ನ ಪೊಲೀಸರು ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜಿಸಿತ್ತು.ಪೊಟೋ೯ಸಿಪಿಟಿ೨:
ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಬಂಧಿಸಿರುವ ಪೊಲೀಸರು.ಪೊಟೋ೯ಸಿಪಿಟಿ೩:
ಮಳೆಯ ನಡುವೆಯೂ ಹೋರಾಟಗಾರ ಬಂಧನಕ್ಕೆ ಹರಸಾಹಸ ಪಡುತ್ತಿರುವ ಪೊಲೀಸರು.