ಕಡೂರು: ಶಿವಮೊಗ್ಗದಲ್ಲಿ ಗುರುವಾರ ನಡೆದ ‘ಪ್ರಜಾಪ್ರಭುತ್ವವನ್ನು ಉಳಿಸಿ, ಅರಾಜಕತೆಯನ್ನು ಅಳಿಸಿ’ ಅಭಿಯಾನದಲ್ಲಿ ಪಾಲ್ಗೊಳ್ಳಲು ಕಡೂರು ಪಟ್ಟಣದಿಂದ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅವರ ನೇತೃತ್ವದಲ್ಲಿ ಮೂರು ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು 104ಕ್ಕೂ ಹೆಚ್ಚು ಬಸ್‌ಗಳಲ್ಲಿ ತೆರಳಿದರು.

ಕಡೂರು: ಶಿವಮೊಗ್ಗದಲ್ಲಿ ಗುರುವಾರ ನಡೆದ ‘ಪ್ರಜಾಪ್ರಭುತ್ವವನ್ನು ಉಳಿಸಿ, ಅರಾಜಕತೆಯನ್ನು ಅಳಿಸಿ’ ಅಭಿಯಾನದಲ್ಲಿ ಪಾಲ್ಗೊಳ್ಳಲು ಕಡೂರು ಪಟ್ಟಣದಿಂದ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅವರ ನೇತೃತ್ವದಲ್ಲಿ ಮೂರು ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು 104ಕ್ಕೂ ಹೆಚ್ಚು ಬಸ್‌ಗಳಲ್ಲಿ ತೆರಳಿದರು.ಪಟ್ಟಣದ ಬಿಜೆಪಿ ಕಚೇರಿ ಆವರಣದಿಂದ ಕಾರ್ಯಕರ್ತರು ಬಸ್‌ಗಳಲ್ಲಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭ ದಲ್ಲಿ ಪಕ್ಷದ ಕಚೇರಿ ಬಳಿ ಅಳವಡಿಸಿದ್ದ ಎಲ್‌ಇಡಿ ಪರದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಸಾಧನೆಗಳನ್ನು ಬಿಂಬಿಸುವ ಗೀತೆಗಳನ್ನು ಪ್ರಸಾರ ಮಾಡಲಾಯಿತು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಮಂಡಲಾಧ್ಯಕ್ಷ ಬಿ.ಪಿ. ದೇವಾನಂದ್, ಮಾರ್ಗದ ಮಧು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಆರ್. ಮಹೇಶ್ ಒಡೆಯರ್, ಶಾಮಿಯಾನ ಚಂದ್ರು, ಮಲ್ಲಿಕಾರ್ಜುನ್ (ಮಲ್ಲು) ಸೇರಿದಂತೆ ವಿವಿಧ ಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.