ಸಾರಾಂಶ
ವ್ಯಾಪಾರ ಮುಗಿಸಿ ಕಬ್ಬಿಣದೊಂದಿಗೆ ತಮ್ಮ ಟಾಟಾ ಸುಮೋದಲ್ಲಿ ತೆರಳುತ್ತಿದ್ದಾಗ ತಾಲೂಕು ರುದ್ರಾಕ್ಷಿಪುರ ಸಮೀಪದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸುಮೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದ ಸುಮಾ ರಸ್ತೆಯಲ್ಲಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.
ಮದ್ದೂರು: ಟಾಟಾ ಸುಮೋ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟು, ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ರುದ್ರಾಕ್ಷಿ ಪುರ ಸಮೀಪದ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಕೋಲಾರ ಜಿಲ್ಲೆ, ಬಂಗಾರಪೇಟೆಯ ಕಬ್ಬಿಣದ ವ್ಯಾಪಾರಿಗಳಾದ ಟಾಟಾ ಸುಮೋ ಚಾಲಕ ಫೈರೋಜ್ ಖಾನ್ (35) ಮೃತ ಪಟ್ಟವರು. ಅಪಘಾತದಲ್ಲಿ ತೀವ್ರ ಗಾಯಗೊಂಡ ಫೈರೋಜ್ ಖಾನ್ ಸ್ಥಳದಲ್ಲೇ ಕೊನೆ ಉಸಿರೆಳೆದಿದ್ದಾರೆ.ಈತನ ಸಹೋದರ ಅಪ್ರೋಜ್ ತೀವ್ರವಾಗಿ ಗಾಯಗೊಂಡಿದ್ದು, ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪ್ರೋಜ್ ಹಾಗೂ ಫೈರೋಜ್ ಇಬ್ಬರು ಸಹೋದರರು ಕಬ್ಬಿಣ ವ್ಯಾಪಾರ ಮಾಡುತ್ತಿದ್ದಾರೆ. ವ್ಯಾಪಾರ ಮುಗಿಸಿ ಕಬ್ಬಿಣದೊಂದಿಗೆ ತಮ್ಮ ಟಾಟಾ ಸುಮೋದಲ್ಲಿ ತೆರಳುತ್ತಿದ್ದಾಗ ತಾಲೂಕು ರುದ್ರಾಕ್ಷಿಪುರ ಸಮೀಪದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸುಮೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದ ಸುಮಾ ರಸ್ತೆಯಲ್ಲಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪಿಎಸ್ಐ ಎಮ್. ಜೆ. ಮಹೇಶ್ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.