ಸಾರಾಂಶ
ಕನ್ನಡಪ್ರಭ ವಾರ್ತೆ ರಾವಂದೂರುಪ. ಜಾತಿ ಮತ್ತು ಪಂಗಡಗಳು ಇರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು.ಪಿರಿಯಾಪಟ್ಟಣ ತಾಲೂಕು ಕೆಳಗನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಪ. ಜಾತಿ, ಪಂಗಡದ ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸೂಕ್ತ ಪರಿಹಾರವನ್ನು ಸಹ ನೀಡಲಾಗುವುದು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಇವರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.ತಾಲೂಕು ಕುಂಬಾರರ ಸಂಘದ ವತಿಯಿಂದ ಸಚಿವ ಕೆ. ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ, ಪಿಎಲ್.ಡಿ ಬ್ಯಾಂಕ್ ಅಧ್ಯಕ್ಷ ಕೆ. ಹೊಲದಪ್ಪ, ಗ್ರಾಪಂ ಅಧ್ಯಕ್ಷೆ ಸುಜಾತ ವಾಸು , ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ ಕೆ.ಆರ್. ಸೋಮಶೇಖರ್, ಮೈಮುಲ್ ನಿರ್ದೇಶಕ ಪ್ರಕಾಶ್, ತಹಸೀಲ್ದಾರ್ ನಿಸರ್ಗಪ್ರಿಯ, ತಾಪಂ ಇಒ ಸುನಿಲ್, ಆಹಾರ ಶಿರಸ್ತೇದಾರ್ ಸಣ್ಣ ಸ್ವಾಮಿ, ಪುಟ್ಟರಾಜ್, ಪಿಎಲ್.ಡಿ ಬ್ಯಾಂಕ್ ನಿರ್ದೇಶಕ ಶಿವಣ್ಣ, ಕಿತ್ತೂರು ಪಿಸಿಎಸ್ ಅಧ್ಯಕ್ಷ ಸುಮಿತ್, ವಿಜಿ, ಪಿಡಿಓ ಮಲ್ಲೇಶ್ ಇದ್ದರು.