ಸಾರಾಂಶ
ತಾಲೂಕಿನ ತಾಳಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಲ್.ನವೀನ್ ಕುಮಾರ್, ಉಪಾಧ್ಯಕ್ಷರಾಗಿ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕನ್ನಡಪ್ರಭವಾರ್ತೆ, ತುರುವೇಕೆರೆ
ತಾಲೂಕಿನ ತಾಳಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಲ್.ನವೀನ್ ಕುಮಾರ್, ಉಪಾಧ್ಯಕ್ಷರಾಗಿ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಐದು ವರ್ಷಕ್ಕೆ ಆಡಳಿತ ಮಂಡಲಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಿತು. 12 ನಿರ್ದೇಶಕರಲ್ಲಿ 5 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ 7 ನಿರ್ದೇಶಕರು ಚುನಾವಣೆಯ ಮೂಲಕ ಆಯ್ಕೆಯಾಗಿದ್ದರು. ಸೋಮವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಕ್ಕೆ ನವೀನ್ ಕುಮಾರ್, ಉಪಾಧ್ಯಕ್ಷ ಸ್ಥಾನ ಕ್ಕೆ ಶಿವಣ್ಣ ನವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಚುನಾವಣಾಧಿಕಾರಿ ಸಿಡಿಓ ಶ್ರೀನಿವಾಸ್ ಈರ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು. ನೂತನ ಅಧ್ಯಕ್ಷ ಪಿ.ಎಲ್.ನವೀನ್ ಕುಮಾರ್ ಮಾತನಾಡಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ನಿರ್ದೇಶಕರಿಗೆ ಧನ್ಯವಾದಗಳು ತಿಳಿಸಿದರು. ಸಹಕಾರ ಸಂಘದಿಂದ ರೈತರಿಗೆ ಸಿಗುವಂತಹ ಎಲ್ಲಾ ಸವಲತ್ತುಗಳನ್ನು ದೊರೆಕಿಸಿಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.ನೂತನ ಅಧ್ಯಕ್ಷ, ಉಪಾಧ್ಯಕ್ಷ ಬೆಂಬಲಿಗರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಸಹಕಾರ ಸಂಘದ ನಿರ್ದೇಶಕರಾದ ಶಿವಸ್ವಾಮಿ, ಜಿತೇಂದ್ರ, ಸವಿತಾ, ಶಿವಣ್ಣ, ಗುರುರಾಜ್, ಜಗದೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಮುಖಂಡರಾದ ಹುಚ್ಚೇಗೌಡ, ಕಾಂತರಾಜು, ಶ್ರೀಕಾಂತ್, ಕೀರ್ತಿ, ಆನಂತ್ ನಾಗ್, ಎ.ಸಿ.ನಂಜುಂಡಿ, ರಮೇಶ್, ಮೋಕ್ಷಪಾಲ, ಯೋಗೀಶ್, ಚಿಂಟು, ಶಂಕರ, ಯೋಗಣ್ಣ, ಮೂರ್ತಯ್ಯ, ವಸಂತ್ ಕುಮಾರ್, ಸಿಇಓ ಶಶಿಧರ್ ಸೇರಿದಂತೆ ಇತರರು ಅಭಿನಂದಿಸಿದರು.