ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪಿ ಆರ್ ಮಂಜುನಾಥ್ ಆಯ್ಕೆ

| Published : Mar 21 2025, 12:35 AM IST

ಸಾರಾಂಶ

ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಆರ್ ಮಂಜುನಾಥ್ ಅವರು ನೇಮಕವಾಗಿದ್ದಾರೆ

ಕನ್ನಡಪ್ರಭ ವಾರ್ತೆ ಶಿರಾ ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಆರ್ ಮಂಜುನಾಥ್ ಅವರು ನೇಮಕವಾಗಿದ್ದಾರೆ. ಈ ಹಿಂದೆ ಶಿರಾ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪಿ.ಆರ್. ಮಂಜುನಾಥ್ ಅವರನ್ನು ಮೇಲ್ದರ್ಜೆಗೇರಿದ ಶಿರಾ ನಗರಾಭಿವೃದ್ಧಿ ಪ್ರಾಧಿಕಾರಕ್ಕೂ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸದಸ್ಯರಾಗಿ ಆಯ್ಕೆ ಸುನಿಲ್, ಲಕ್ಕನಹಳ್ಳಿ ಶ್ರೀನಿವಾಸ್, ಎತ್ತಪ್ಪನಹಟ್ಟಿ ಕಾಳಯ್ಯ, ಲಕ್ಷ್ಮೀ ದೇವಮ್ಮ ಅವರು ಆಯ್ಕೆಯಾಗಿದ್ದು, ಎಲ್ಲರಿಗೂ ಶಾಸಕ ಡಾ.ಟಿ.ಬಿ.ಜಯಚಂದ್ರ ಅವರು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಹುಣಸೇಹಳ್ಳಿ ಶಶಿಧರ್, ಸಚಿನ್ ಹೊನ್ನೇಶ್, ಯಲದಬಾಗಿ ನವೀನ್, ವಾಜರಹಳ್ಳಿ ರಮೇಶ್ ಸೇರಿದಂತೆ ಹಲವರು ಹಾಜರಿದ್ದರು.