ತಾಲೂಕಿನ ಡಿ.ಕಲ್ಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಪಿ.ರಾಜು, ಉಪಾಧ್ಯಕ್ಷರಾಗಿ ಕೆ.ಎಚ್.ನಾಗರಾಜು ಅವಿರೋಧ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭವಾರ್ತೆ ತುರುವೇಕೆರೆ

ತಾಲೂಕಿನ ಡಿ.ಕಲ್ಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಪಿ.ರಾಜು, ಉಪಾಧ್ಯಕ್ಷರಾಗಿ ಕೆ.ಎಚ್.ನಾಗರಾಜು ಅವಿರೋಧ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನೂತನ ಆಡಳಿತ ಮಂಡಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಗಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಡಿ.ಪಿ.ರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಎಚ್.ನಾಗರಾಜು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಶಿರಾ ಸಿ ಡಿ ಒ ಶ್ರೀನಿವಾಸಪ್ಪ ಫಲಿತಾಂಶ ಘೋಷಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನೂತನ ಅಧ್ಯಕ್ಷ ಡಿ.ಪಿ.ರಾಜು ಮಾತನಾಡಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲ ನಿರ್ದೇಶಕರಿಗೂ ಧನ್ಯವಾದಗಳನ್ನು ತಿಳಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸಿದ್ದಲಿಂಗಪ್ಪನವರ ಸಹಕಾರ ಪಡೆದು ಜಿಲ್ಲಾ ಬ್ಯಾಂಕ್ ಅಧ್ಯಕ್ಷರಾದ ರಾಜಣ್ಣರ ಭೇಟಿ ಮಾಡಿ. ಈ ಸಂಘದಿಂದ ಹೊಸ ಸದಸ್ಯರಿಗೆ ಸಾಲ ಸೌಲಭ್ಯ ಕೊಡಿಸುವುದಾಗಿ ಚುನಾವಣೆ ವೇಳೆ ನೀಡಿದ್ದ ಭರವಸೆಯನ್ನು ಈಡೇರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸಹ ನಿರ್ದೇಶಕರಾದ ಕೆ.ನಿ.ದಂಡೇಗೌಡ, ರಾಮಲಿಂಗೇಗೌಡ, ವನಜಾ, ಲಕ್ಷ್ಮಮ್ಮ, ಚಿಕ್ಕನಾಗಯ್ಯ, ಸೋಮಶೇಖರ್, ನಂಜಪ್ಪ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ನಾಗರಾಜು ಮುಖಂಡರಾದ ಪುಟ್ಟಸ್ವಾಮಿಗೌಡ, ಚಿಕ್ಕರಂಗಯ್ಯ, ಹುಚ್ಚೇಗೌಡ, ಲೋಕೇಶ್ ಸೇರಿದಂತೆ ಮುಖಂಡರು ಅಭಿನಂದಿಸಿದರು.