ಸಾರಾಂಶ
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬಾಡ ಗ್ರಾಮದಿಂದ ಶಿಗ್ಗಾಂವಿಯವರೆಗೆ 13 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಪ್ರತಿಭಟನೆ ಮೆರವಣಿಗೆ ಮಾಡಿದರು.
ಶಿಗ್ಗಾಂವಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬಾಡ ಗ್ರಾಮದಿಂದ ಶಿಗ್ಗಾಂವಿಯವರೆಗೆ 13 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಪ್ರತಿಭಟನೆ ಮೆರವಣಿಗೆ ಮಾಡಿದರು.
ಪಾದಯಾತ್ರೆ ಆಗಮಿಸಿದ ಬಳಿದ ಡಾ. ಬಿ.ಆರ್. ಅಂಬೇಡ್ಕರ್, ವೀರರಾಣಿ ಕಿತ್ತೂರ ಚನ್ನಮ್ಮ, ಮಾಬುಸುಬಾನಿ ದರ್ಗಾಕ್ಕೆ ಅಜ್ಜಂಪೀರ ಖಾದ್ರಿ ಭೇಟಿ ನೀಡಿ ಆಶೀರ್ವಾದ ಪಡೆದರು.ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜೀನಾಮೆ ನೀಡಬಾರದು. ಬಿಜೆಪಿಯವರಿಗೆ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ. ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ. ರಾಜಭವನವನ್ನ ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದವರು ಸಿದ್ದರಾಮಯ್ಯನವರು. ಐದು ಗ್ಯಾರಂಟಿಯನ್ನು ನೀಡುವ ಮೂಲಕ ರಾಜ್ಯದ ಜನರಿಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ ಎಂದರು.ಬಿಜೆಪಿ ನಾಯಕರ ಮೇಲೂ ಎಫ್‌ಐಆರ್ ಆಗಿದೆ ಅವರು ಕೂಡಾ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಹಲವಾರು ಮುಖಂಡರುಗಳು ಮಾತನಾಡಿದರು,
ಅಣ್ಣಪ್ಪ ಮಾಣಿ, ಮಂಜುನಾಥ ತಿಮ್ಮಾಪೂರ, ಬೀರೇಶಕುಮಾರ ಜೆಟ್ಟಪ್ಪನವರ, ರವಿಕಾಂತ ಕೋಣಪ್ಪನವರ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಇದ್ದರು.