ಸಾರಾಂಶ
ನಾವು ಯಾವುದೇ ಅಧಿಕಾರ ದಾಹದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕಿತ್ತೆಸೆಯಬೇಕು ಎಂಬ ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು
ನಾವು ಯಾವುದೇ ಅಧಿಕಾರ ದಾಹದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕಿತ್ತೆಸೆಯಬೇಕು ಎಂಬ ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಂಗಳವಾರ ತಾಲೂಕಿನ ಸೋಮನಹಳ್ಳಿ ಮತ್ತು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ನಾಲ್ಕನೇ ದಿನದ ಮೈಸೂರು ಚಲೋ ಪಾದಯಾತ್ರೆಯ ಬಹಿರಂಗ ಸಭೆಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಈ ನಡುವೆ ಪಾದಯಾತ್ರೆ ಮಂಡ್ಯ ತಲುಪಿದೆ.