: ಯುವಜನತೆ ಕೇವಲ ಮನೋರಂಜನಾ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಸಮಾಜದ ನೋವು–ನಲಿವುಗಳಿಗೆ ಸ್ಪಂದಿಸುವಂತಹ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಯುವಕರಲ್ಲಿ ಸಾಮಾಜಿಕ ಕಳಕಳಿ ಬೆಳೆದಾಗ ಮಾತ್ರ ಇಂತಹ ಕಾರ್ಯಕ್ರಮಗಳು ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ವಿಶ್ರಾಂತ ಪ್ರಾಚಾರ್ಯ ಪ್ರೊ. ಸುರೇಶ್ ವಿ ಹೇಳಿದರು.
ಬೆಳ್ತಂಗಡಿ: ಯುವಜನತೆ ಕೇವಲ ಮನೋರಂಜನಾ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಸಮಾಜದ ನೋವು–ನಲಿವುಗಳಿಗೆ ಸ್ಪಂದಿಸುವಂತಹ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಯುವಕರಲ್ಲಿ ಸಾಮಾಜಿಕ ಕಳಕಳಿ ಬೆಳೆದಾಗ ಮಾತ್ರ ಇಂತಹ ಕಾರ್ಯಕ್ರಮಗಳು ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ವಿಶ್ರಾಂತ ಪ್ರಾಚಾರ್ಯ ಪ್ರೊ. ಸುರೇಶ್ ವಿ ಹೇಳಿದರು.
ಲಾಯಿಲ ಗ್ರಾಮದ ಪಡ್ಲಾಡಿ ಉತ್ಸಾಹಿ ಯುವಕ ಮಂಡಲದ ವಠಾರದಲ್ಲಿ ಸೆ 04 ರಂದು ನಡೆದ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.34 ವರ್ಷಗಳ ಪರಂಪರೆ, ಸಮಾಜಮುಖಿ ಹೆಜ್ಜೆಗೌರವಾಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ, ಪಡ್ಲಾಡಿಯಲ್ಲಿ ಕಳೆದ 34 ವರ್ಷಗಳಿಂದ ಜಾತಿ–ಧರ್ಮದ ಭೇದವಿಲ್ಲದೆ, ಹಿರಿಯರ ಮಾರ್ಗದರ್ಶನ ಹಾಗೂ ಊರವರ ಸಹಕಾರದೊಂದಿಗೆ ಮೊಸರು ಕುಡಿಕೆ ಹಾಗೂ ಅಷ್ಟಮಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. 35 ನೇ ವರ್ಷ ಈ ಬಾರಿಯೂ ಕಾರ್ಯಕ್ರಮ ಎಲ್ಲರ ಸಹಕಾರದಲ್ಲಿ ಅದ್ಧೂರಿಯಾಗಿ ನಡೆದಿದೆ ಎಂದರು.ಈ ಬಾರಿಯೂ ಕಾರ್ಯಕ್ರಮದ ಮೂಲಕ ಉಳಿಕೆಯಾಗುವ ಹಣದಲ್ಲಿ ಅಶಕ್ತ ಬಡ ಕುಟುಂಬವೊಂದಕ್ಕೆ ನೆರವು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಸೇವೆಯಿಂದ ವರ್ಗಾವಣೆಗೊಂಡ ಆರೋಗ್ಯ ಸಹಾಯಕಿಗೆ ಸನ್ಮಾನಗ್ರಾಮದಲ್ಲಿ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಗುಣವತಿ ಅವರನ್ನು ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಸಲ್ಲಿಸಿದ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಅನಿಲ್ ವಿಕ್ರಂ ಡಿಸೋಜ, ಸ.ಹಿ. ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಮಮತಾ, ಅಂಬೇಡ್ಕರ್ ಭವನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ನೆನಪು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.ಮಕ್ಕಳು, ಸಾರ್ವಜನಿಕರಿಗಾಗಿ ದಿನವಿಡೀ ವಿವಿಧ ಸ್ಪರ್ಧೆಗಳುಮೊಸರು ಕುಡಿಕೆ ಉತ್ಸವದ ಅಂಗವಾಗಿ ಬೆಳಗ್ಗಿನಿಂದ ಸಂಜೆಯವರೆಗೆ ಮಕ್ಕಳು ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗ್ರಾಮದ ಮಕ್ಕಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.ಅಚ್ಚುಕಟ್ಟಾಗಿ ನಡೆದ ಉದ್ಘಾಟನಾ ಕಾರ್ಯಕ್ರಮಬೆಳಗ್ಗೆ ನಡೆದ ಕಾರ್ಯಕ್ರಮವನ್ನು ಸಮಿತಿಯ ಸಲಹೆಗಾರ ಕೃಷಿಕ ಸಿಪ್ರಿಯನ್ ಪಿಂಟೋ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಲಾಯಿಲ ಸೇವಾ ಪ್ರತಿನಿಧಿ ಗೀತಾ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪಡ್ಲಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಶ್ವೇಶ್ವರ ಭಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಮಲ್ಲಿಕಾ ಹಾಗೂ ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕಿ ಜಯಂತಿ ಆರಾಧ್ಯ ಶುಭ ಹಾರೈಸಿದರು.ಕಾರ್ಯಕ್ರಮವನ್ನು ಜಯಾನಂದ ಅಂಕಾಜೆ ಹಾಗೂ ವಿನಯ್ ಪಡ್ಲಾಡಿ ನಿರ್ವಹಿಸಿದರು.