ಸಾರಾಂಶ
ಶ್ರೀಮತಿ ಪದ್ಮ ಜಿ.ಮಾದೇಗೌಡ ಪ್ರತಿಷ್ಠಾನ ವತಿಯಿಂದ ಮಾ.19 ರಂದು 10ನೇ ವರ್ಷದ ಶ್ರೀಮತಿ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ, ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ತಿಳಿಸಿದರು.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಶ್ರೀಮತಿ ಪದ್ಮ ಜಿ.ಮಾದೇಗೌಡ ಪ್ರತಿಷ್ಠಾನ ವತಿಯಿಂದ ಮಾ.19 ರಂದು 10ನೇ ವರ್ಷದ ಶ್ರೀಮತಿ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ, ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ತಿಳಿಸಿದರು.ಭಾರತೀ ಎಜುಕೇಷನ್ ಟ್ರಸ್ಟ್ ಆಡಳಿತ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 10.30ಕ್ಕೆ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ಆರ್.ನಂದಿನಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಸಮಾರಂಭದಲ್ಲಿ ಬೆಂಗಳೂರಿನ ಜಲ ಸಾರಿಗೆ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಂ ರಾಯಪುರ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಬ್ಯಾಟರಾಯಪುರ ಶ್ರೀ ಶಾರದಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ಹೊಂಬಾಳೆ ಪ್ರಧಾನ ಭಾಷಣ ಮಾಡುವರು. ಬೆಂಗಳೂರಿನ ಲಿಡ್‌ಕರ್ ವ್ಯವಸ್ಥಾಪಕ ನಿರ್ದೇಶಕಿ ಡಾ. ವಸುಂಧರಾ , ಪದ್ಮ ಜಿ.ಮಾದೇಗೌಡ, ಭಾರತೀ ಎಜುಕೇಷನ್ ಟ್ರಸ್ಟ್ ಚೇರ್‍ಮನ್ , ಎಂಎಲ್ಸಿ ಮಧು ಜಿ.ಮಾದೇಗೌಡ, ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು ಪಾಲ್ಗೊಳ್ಳುವರು ಎಂದು ತಿಳಿಸಿದರು.ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ಅಂಗ ಸಂಸ್ಥೆಯ ಮಹಿಳಾ ಶಿಕ್ಷಕಯರಿಂದ ವಿವಿಧ ಸಾಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.
ಸುದ್ಧಿಗೋಷ್ಠಿಯಲ್ಲಿ ಭಾರತೀಕಾಲೇಜಿನ ಪ್ರಾಂಶುಪಾಲ ಡಾ ಎಂ.ಎಸ್.ಮಹದೇವಸ್ವಾಮಿ, ಭಾರತೀ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ.ಎಸ್.ನಾಗರಾಜು, ಕಾರ್ಯಕ್ರಮದ ಸಂಚಾಲಕಿ ಮಮತನಾಗ್ ಸೇರಿದಂತೆ ಹಲವರು ಇದ್ದರು.