ಸಾರಾಂಶ
ಕಿನ್ನಿಗೋಳಿ ಸಮೀಪದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಭಾಂಗಣದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರ ಒಗ್ಗೂಡುವಿಕೆಯ 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ ಮೂಲ್ಕಿ
ಸರ್ವ ಧರ್ಮದ ಸಾಮರಸ್ಯ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಚರ್ಚ್ ನ ಧರ್ಮ ಗುರುಗಳಾದ ವಂ.ಫಾ.ಜೊಕಿಂ ಫೆರ್ನಾಂಡಿಸ್ ಹೇಳಿದರು.ಕಿನ್ನಿಗೋಳಿ ಸಮೀಪದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಭಾಂಗಣದಲ್ಲಿ ನಡೆದ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರ ಒಗ್ಗೂಡುವಿಕೆಯ 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ಅಧ್ಯಕ್ಷ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಟೀಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ ವಿ, ಕೆಮ್ರಾಲ್ ಗ್ರಾ.ಪಂ. ಸದಸ್ಯೆ ಮೆಲೀಟಾ ಡಿಸೋಜ, ಸಾಮಾಜಿಕ ಕಾರ್ಯಕರ್ತ ಮೌಶೀರ್ ಅಹಮದ್, ಶಶಿ ಸುರೇಶ್, ಸುನೀತಾ ವಿಶಾಲಾಕ್ಷಿ, ಸರೀತಾ ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಉಪನಿರೀಕ್ಷಕ ಮನೋಹರ್, ನಿವೃತ್ತ ಮುಖ್ಯ ಶಿಕ್ಷಕಿ ಲಿನೆಟ್ ಲೋಬೋ ಅವರನ್ನು ಗೌರವಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.