ಕಳವಾರಿನಲ್ಲಿರುವ ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದುರಂತ ಸಂಭವಿಸಿದ ತಕ್ಷಣವೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿವೆ.
ಮಂಗಳೂರು ; ಕಳವಾರಿನಲ್ಲಿರುವ ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದುರಂತ ಸಂಭವಿಸಿದ ತಕ್ಷಣವೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿವೆ.
ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಲಾಗಿದೆ. ಯಾವುದೇ ರೀತಿಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮೀಪದ ಆಸ್ಪತ್ರೆಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪಡೆಗಳು ಸಂಪೂರ್ಣ ಸನ್ನದ್ಧವಾಗಿರಲು ಅಧಿಕಾರಿಗಳಿಗೆ ಸೂಚಿಸಿದರು.ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ, ಕಾಂಗ್ರೆಸ್ ಹಿರಿಯ ಮುಖಂಡರಾದ ಸುಭಾಶ್ಚಂದ್ರ ಕೊಳ್ನಾಡ್, ತಾ.ಪಂ. ಮಾಜಿ ಸದಸ್ಯ ಬಶೀರ್, ಕಾಂಗ್ರೆಸ್ ವಲಯಾಧ್ಯಕ್ಷರು, ಕಾಂಗ್ರೆಸ್‌ನ ಪ್ರಮುಖ ನಾಯಕರು, ಕಾರ್ಯಕರ್ತರು ಜತೆಗಿದ್ದರು.--------------