ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ನಡೆದ ಸಾರಿಗೆ ನೌಕರರ ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾದರೆ, ಇನ್ನು ಕೆಲವರು ಗೌರಾಗಿದ್ದರು. ಹೀಗಾಗಿ, ಬಸ್ ಸಂಚಾರ ಬಂದ್ ಆಗಿದ್ದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಯಾಣಿಕರು ಖಾಸಗಿ ವಾಹನಗಳನ್ನೇ ಅವಲಂಬಿಸುವಂತಾಗಿತ್ತು. ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಬಳಕೆ ಕಡಿಮೆ ಇರುವುದರಿಂದ, ಜನರು ತಮ್ಮ ಕೆಲಸ ಕಾರ್ಯಗಳಿಗೆ ಸ್ವಂತ ವಾಹನಗಳ ಮೊರೆ ಹೋಗಿದ್ದರು. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಿದ್ದ 500ಕ್ಕೂ ಅಧಿಕ ಬಸ್‌ಗಳಲ್ಲಿ ಕೇವಲ 147 ಬಸ್‌ಗಳು ಮಾತ್ರ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿದವು.