ನಾಗರಿಕರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಸಮಾನತೆ ಕಡಿಮೆ ಮಾಡಿ ಸಮಾನತೆ ಸ್ಥಾಪಿಸುವುದು ಈ ಸಮೀಕ್ಷೆಯ ಉದ್ದೇಶ. ಸರ್ಕಾರದ ಸೌಲಭ್ಯಗಳು ನಾಡಿನ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಎನ್ನುವುದೇ ಗುರಿ. ಅ.7ರ ತನಕ ನಡೆಯಲಿರುವ ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಜವಾಬ್ದಾರಿಯುತವಾಗಿ ಉತ್ತರಿಸಿ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 1’ ಚಿತ್ರದ ಟ್ರೇಲರ್ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಐದು ಭಾಷೆಗಳಲ್ಲಿ 2.18 ಕೋಟಿ ವೀಕ್ಷಣೆ ಕಾಣುವ ಮೂಲಕ ದಾಖಲೆ ಮಾಡಿದೆ.
ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಕಂಪನಿ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರಿಗೆ ಕೇಂದ್ರ ದೂರ ಸಂಪರ್ಕ ಸಚಿವಾಲಯದ ನೌಕರರ ಹೆಸರಿನಲ್ಲಿ ವಂಚಿಸಿ ಹಣ ದೋಚಲು ಸೈಬರ್ ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದೆ.
ಚಿತ್ರ ನಟ ಉಪೇಂದ್ರ ದಂಪತಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ಬಳಿಕ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರ ಪತ್ನಿಗೆ ಸೈಬರ್ ದುರುಳರು ಕಾಟ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಚಿನ್ನಯ್ಯನನ್ನು, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್ ಹಾಗೂ ವಿಠಲ ಗೌಡ ಸೇರಿ ದಾರಿತಪ್ಪಿಸಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಅಪಚಾರ ಹಾಗೂ ಅಪಖ್ಯಾತಿ ತರುವ ನಿಟ್ಟಿನಲ್ಲಿ ನಾವು ಹೇಳಿದಂತೆ ಕೇಳಬೇಕು ಎಂದು ಚಿನ್ನಯ್ಯನಿಗೆ ತಾಕೀತು ಮಾಡಿದ್ದಾರೆ.