ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ: ಕುತ್ಯಾರು ನವೀನ್ ಶೆಟ್ಟಿವಿಶ್ವದ ದೊಡ್ಡಣ್ಣ ಅಮೆರಿಕ, ಭಾರತದ ಅಭಿವೃದ್ಧಿಯ ನಾಗಾಲೋಟವನ್ನು ಸಹಿಸದೆ ಭಾರತಕ್ಜೆ ಗರಿಷ್ಠ ಶೇ.50 ತೆರಿಗೆಯನ್ನು ವಿಧಿಸುವ ಮೂಲಕ ದೇಶದ ಅಭಿವೃದ್ಧಿಯ ವೇಗವನ್ನು ತಡೆಯಲು ಯತ್ನಿಸಿದರೂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದಕ್ಕೆ ತಕ್ಕುದಾದ ಸಕಾಲಿಕ ನಿರ್ಣಯವನ್ನು ತೆಗೆದುಕೊಂಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.