ಯೂರಿಯಾ ಕಾಳಸಂತೆ ಮಾರಾಟಕ್ಕೆ ಕಾಂಗ್ರೆಸ್ ಸರ್ಕಾರ ಅನುವುಮುಂಗಾರು ಹಂಗಾಮಿಗೆ ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದರೂ, 8.73 ಲಕ್ಷ ಮೆಟ್ರಿಕ್ ಟನ್ ಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಸಿದ್ದರೂ, ಕೃತಕ ಅಭಾವ ಸೃಷ್ಟಿಸಿರುವ ಕಾಳಸಂತೆಕೋರರ ಕಾಂಗ್ರೆಸ್ ಸರ್ಕಾರ ಗೊಬ್ಬರವನ್ನು ₹500 ದರದಲ್ಲಿ ಮಾರಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.