ಗ್ರಾಮೀಣ ಪ್ರದೇಶದ ವಂಚಿತ ಸಮುದಾಯಕ್ಕೆ ಶ್ರೀಗಳಿಂದ ಶಿಕ್ಷಣ ಭಾಗ್ಯಸುತ್ತೂರು ಕ್ಷೇತ್ರದ ಲಿಂಗೈಕ್ಯ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹು ಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು, ಬೃಹತ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ರಾಜಗುರುತಿಲಕ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಕಾರ್ಯ ಮಹತ್ವದ್ದಾಗಿದೆ ಎಂದು ಶ್ರೀ ಕಲ್ಯಾಣಸ್ವಾಮಿಗಳು ತಿಳಿಸಿದರು. ಮೈಸೂರಿನ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಸಮಾಜಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರಿಗೆ ೧೯೭೦ ರಲ್ಲಿ ’ರಾಜಗುರುತಿಲಕ’ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು. ಜತೆಗೆ ಮರಣೋತ್ತರವಾಗಿ, ಮೈಸೂರು ವಿಶ್ವವಿದ್ಯಾನಿಲಯವು ೧೯೮೯ ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು ಎಂದು ವಿವರಿಸಿದರು.