ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮುಂಬಡ್ತಿಗೆ ಪ್ರಿಯಾಂಕ್ ಖರ್ಗೆ ಪತ್ರಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು /ವಿಲೀನಗೊಳಿಸಲು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಮುಂಬಡ್ತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅಪರ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.