ಹಂಸವಾಹಿನಿ ಅಲಂಕಾರ: ಕಂಗೊಳಿಸಿದ ಶಾರದೆ ಇಲ್ಲಿನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ವಿಜಯನಗರ ಕಾಲದ ಗತವೈಭವ ನೆನಪಿಸುವಂತೆ ಪ್ರತಿ ವರ್ಷ ಸಂಪ್ರದಾಯದಂತೆ ನವರಾತ್ರಿ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಗದ್ಗುರುಗಳ ನವರಾತ್ರಿ ದರ್ಬಾರ್ ದಸರೆಗೆ ವಿಶೇಷ ಮೆರಗು ನೀಡುತ್ತಿದೆ.