ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಭಾನುವಾರವೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿಲ್ಲ.
ಸಿಎಂ ಸಿದ್ದರಾಮಯ್ಯಗೆ ಯಾಕೆ ಇಂತಹ ದುರ್ಬುದ್ಧಿ ಬಂದಿದೆಯೋ ಗೊತ್ತಿಲ್ಲ. ಕಾಂಗ್ರೆಸ್‌ನವರು ರಾಜ್ಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆಂದು ಜನರೇ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕ್ಷೇತ್ರದ ಕುರಿತಾಗಿ ಇತ್ತೀಚೆಗೆ ನಡೆದ ಆಘಾತಗಳಿಂದ ನಾನು ಕೂಡ ಜರ್ಝರಿತಗೊಂಡಿದ್ದೇನೆ. ಕಳೆದ ಕೆಲ ದಿನಗಳಿಂದ ನಡೆಯುತ್ತಿರುವುದು ಷಡ್ಯಂತ್ರ ಎಂಬುದು ನ್ಯಾಯಾಲಯದಲ್ಲೇ ಗೊತ್ತಾಗಿದೆ.
ಎಂಜಿನಿಯರಿಂಗ್ ಮೂರನೇ ಅಥವಾ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದರೂ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಬಂಧಿಸಿದ ಕಾಲೇಜುಗಳಲ್ಲಿ ವರದಿ ಮಾಡಿಕೊಂಡಿಲ್ಲ. ಆ ಎಲ್ಲಾ ವಿದ್ಯಾರ್ಥಿಗಳಿಗೂ ಶೀಘ್ರ ನೋಟಿಸ್ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
46 ಹಿಂದೂ ಜಾತಿಗಳ ಜತೆ ಕ್ರಿಶ್ಚಿಯನ್ ಸೇರಿಸಿ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ್ದ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ 33 ಕ್ರಿಶ್ಚಿಯನ್ ಜತೆಗಿನ ಹಿಂದೂ ಜಾತಿಗಳ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿರುವುದಾಗಿ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ.