ಉಪಪಂಗಡ ಹಲವಿದ್ದರೂ ಒಕ್ಕಲಿಗರೆಲ್ಲಾ ಒಂದೇಜಾತಿ ಜನಗಣತಿ ಸಂದರ್ಭದಲ್ಲಿ ಎಲ್ಲಾ ಒಕ್ಕಲಿಗರ ಉಪಪಂಗಡಗಳನ್ನು ಬಿಟ್ಟು ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ನಮೂದಿಸಬೇಕು. ಆ ಮೂಲಕ ಒಕ್ಕಲಿಗರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸರ್ಕಾರದಿಂದ ಹಕ್ಕು, ಸೌಕರ್ಯ ಪಡೆಯಲು ಒಕ್ಕಲಿಗರು ಸಂಘಟಿತರಾಗಿ ಜಾಗೃತರಾಗಬೇಕು ಎಂದು ಒಕ್ಕಲಿಗ ಸಮಾಜದ ಸ್ವಾಮೀಜಿಗಳು, ವಿವಿಧ ಮುಖಂಡರು ಮನವಿ ಮಾಡಿದರು.