ಜಾತಿ ರಾಜಕಾರಣದಿಂದ ಕಾಂಗ್ರೆಸ್‌ಗೆ ಸೋಲು: ಮಾಜಿ ಶಾಸಕ ಕುಮಾರ ಬಂಗಾರಪ್ಪರಾಜಕಾರಣ ಎನ್ನುವುದು ಒಂದು ಜಾತಿ, ವರ್ಗ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದರೆ ಯಶಸ್ಸು ಸಾಧ್ಯ. ಆದರೆ ಇಲ್ಲಿನ ಶಾಸಕರು ಜಾತಿ ರಾಜಕಾರಣ ಮೂಲಕ ಒಂದು ವರ್ಗದ ಮತಗಳ ಸೆಳೆಯಲು ಹೋಗಿ ಮುಗ್ಗರಿಸಿದ್ದಾರೆ. ಅಲ್ಲದೇ ಎಸ್.ಬಂಗಾರಪ್ಪ ಮತ್ತು ಡಾ. ರಾಜ್ ಕುಟುಂಬವನ್ನು ಚುನಾವಣೆಯಲ್ಲಿ ಎಳೆ ತಂದು ಗೆಲ್ಲಲಾಗದೇ ಮತದಾರರಿಂದ ತಿರಸ್ಕೃತಗೊಂಡಿದ್ದಾರೆ. ತಾಲೂಕಿನಲ್ಲಿ ಬಿಜೆಪಿಗೆ ಎಸ್ಸಿ, ಎಸ್ಟಿ ಸೇರಿದಂತೆ ಸಣ್ಣ ಸಣ್ಣ ಸಮುದಾಯಗಳೂ ಮತ ನೀಡಿ ಅಭಿವೃದ್ಧಿ ರಾಜಕಾರಣಕ್ಕೆ ಕೈಜೋಡಿಸಿವೆ.