ಡಾ.ಪ್ರಭಾಗೆ ಶುಭಾಶಯ ಸುರಿಮಳೆಎರಡೂವರೆ ದಶಕದಿಂದ ಕೈ ತಪ್ಪಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಕೈವಶ ಮಾಡಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಂಡ, ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಂಸದರಾದ ಮೊದಲ ದಿನ ಬೆಳಗ್ಗೆಯಿಂದ ರಾತ್ರಿವರೆಗೂ ಮನೆಗೆ ಬಂದವರ ಶುಭ ಹಾರೈಕೆಗಳ ಸಾಗರದಲ್ಲಿ ದಿನ ಕಳೆಯಬೇಕಾಯಿತು. ಲೋಕಸಭಾ ಕ್ಷೇತ್ರ ಫಲಿತಾಂಶದಲ್ಲಿ ಎಲ್ಲ 19 ಸುತ್ತುಗಳಲ್ಲೂ ಬಹುತೇಕ ತಾವೇ ಮೇಲುಗೈ ಸಾಧಿಸಿ, ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ. ಇಡೀ ಕಾಂಗ್ರೆಸ್ ಪಾಳೆಯದಲ್ಲೇ ಮಿಂಚಿನ ಸಂಚಾರ ತಂದ ಡಾ.ಪ್ರಭಾ ಮಲ್ಲಿಕಾರ್ಜುನ ಈಗ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದ್ದಾರೆ.