ಸಿಇಟಿ: ಸರ್‌ಎಂವಿ ಸಮೂಹ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ2024ರ ಸಿಇಟಿ ಫಲಿತಾಂಶದಲ್ಲಿ ಸರ್ ಎಂವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಜಿ.ಎ. ಅಂಶಿಕ್, ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಡಿ.ವಿ. ವಿನಯ್ ರಾಜ್ಯಕ್ಕೆ 37ನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.