ಮರಿತಿಬ್ಬೇಗೌಡರ ಗೆಲುವು ಖಚಿತ: ಕೆ.ಮರೀಗೌಡ ವಿಶ್ವಾಸಮರಿತಿಬ್ಬೇಗೌಡರು ಕಳೆದ 24 ವರ್ಷಗಳಿಂದ ವಿಧಾನಪರಿಷತ್ ಸದಸ್ಯರಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಶಿಕ್ಷಕ ಸಮುದಾಯದ ಪ್ರತಿನಿಧಿಯಾಗಿ ಶಿಕ್ಷಣ ಕ್ಷೇತ್ರದ ಘನತೆ ಮತ್ತು ಶಿಕ್ಷಕರ ಆತ್ಮಗೌರವಕ್ಕೆ ಧಕ್ಕೆಯಾಗದಂತೆ ಕೆಲಸ ಮಾಡಿದ್ದಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಸದನದ ಒಳಗೆ ಮತ್ತು ಸದನದ ಹೊರಗೆ ಹೋರಾಟ ಮಾಡಿ, ನ್ಯಾಯ ದೊರಕಿಸುವಲ್ಲಿ ಯಶಸ್ವಿಯಾಗಿದ್ದಾರೆ.