ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ಯಶಸ್ವಿಗೊಳಿಸಿ: ಡಿಸಿ ಸಂಗಪ್ಪಜಿಲ್ಲೆಯಾದ್ಯಂತ ಸೆ.22 ರಿಂದ ಅ.7ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜರುಗಲಿದ್ದು, ಸಮೀಕ್ಷೆಗೆ ಆಗಮಿಸಿದ ಗಣತಿದಾರರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ, ಸಹಕರಿಸುವ ಮೂಲಕ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಕರೆ ನೀಡಿದ್ದಾರೆ.