ನೈಋತ್ಯ ಮಾನ್ಸೂನ್ ಹಿನ್ನೆಲೆ: ಮುನ್ನೆಚ್ಚರಿಕೆಗೆ ಡಿಸಿ ಸೂಚನೆಕೇರಳ ಕರಾವಳಿ ಮತ್ತು ಈಶಾನ್ಯ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಅಪ್ಪಳಿಸಲಿದ್ದು, ಕೆಲವೇ ಗಂಟೆಗಳಲ್ಲಿ ಮುಂಗಾರು ಆಗಮಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಅಗತ್ಯ ಮಳೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದ್ದಾರೆ.