ಸಂತ್ರಸ್ತ ರೈತರ ಭೂಮಿಗೆ ಬೆಲೆ ನಿಗದಿ ಐತಿಹಾಸಿಕ ನಿರ್ಧಾರ: ಅಜಯಕುಮಾರ ಸರನಾಯಕಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಸಂತ್ರಸ್ತ ರೈತರ ಭೂಮಿಗೆ ಸರ್ಕಾರ ಬೆಲೆ ನಿಗದಿ ಮಾಡಿದ್ದು ಐತಿಹಾಸಿಕ ತೀರ್ಪಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರಿಗೆ ಹಾಗೂ ಉತ್ತರ ಕರ್ನಾಟಕ ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷ್ಣಾ ಮೇಲ್ದಂಡೆ ಯೋಜನೆಯ ಮುಳುಗಡೆ ಸಂತ್ರಸ್ತರ ಹೋರಾಟ ವೇದಿಕೆಯ ಗೌರವಾಧ್ಯಕ್ಷ ಅಜಯಕುಮಾರ ಸರನಾಯಕ ಹೇಳಿದರು.