ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕು. ಜೊತೆಗೆ ಇಲಾಖೆಯ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದರು.
ವಾಲ್ಮೀಕಿ ನಿಗಮಕ್ಕೂ ಐಟಿ ಕಂಪನಿಗೂ ಏನು ಸಂಬಂಧ, ಪರಿಶಿಷ್ಟ ಜಾತಿ ಅಭಿವೃದ್ಧಿಗಾಗಿ ಹಣ ವಿನಿಯೋಗಿಸುವ ನಿಗಮ ಐಟಿ ಕಂಪನಿಗೆ ಹಣ ಹೇಗೆ ವರ್ಗಾಯಿಸಲಿದೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯನವರೇ ಇದ್ದರೂ ಹಣಕಾಸು ಸಚಿವಾಲಯದ ಅನುಮತಿಯಿಲ್ಲದೆ ಹೇಗೆ ವರ್ಗಾವಣೆ ಆಗಿದೆ.
ಸ್ಟಾರ್ ಚಂದ್ರು ಸಹ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದವರು. ಇನ್ನು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮರಿತಿಬ್ಬೇಗೌಡ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಈಗ ಕಾಂಗ್ರೆಸ್ ಪಕ್ಷಕ್ಕೆ ವಲಸೆ ಹೋಗಿದ್ದಾರೆ.