ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಪೊಲೀಸರು ಒತ್ತು ನೀಡಲಿಪೊಲೀಸ್ ಸಿಬ್ಬಂದಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಕಲ್ಯಾಣ ಮತ್ತು ಶಿಕ್ಷಣ ಟ್ರಸ್ಟ್ ಹರಿಹರ ತಾಲೂಕು ಕೊಂಡಜ್ಜಿಯಲ್ಲಿ ಪೊಲೀಸ್- ಪಬ್ಲಿಕ್ ಶಾಲೆ ಆರಂಭಿಸಿದ್ದು, ಅದೇ ಮಾದರಿಯಲ್ಲಿ ದಾವಣಗೆರೆಯಲ್ಲೂ ಪೊಲೀಸ್ ಚಿಣ್ಣರ ಅಂಗಳ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.