ಹಿಂದೂ ಜಾತಿಗಳ ಮಧ್ಯೆ ಕ್ರೈಸ್ತರ ನುಗ್ಗಿಸುವ ಹುನ್ನಾರ ಖಂಡಿಸಿ ಪ್ರತಿಭಟನೆಶೈಕ್ಷಣಿಕ, ಸಾಮಾಜಿಕ ಜಾತಿ ಜನಗಣತಿ ಸಮೀಕ್ಷೆಯಲ್ಲಿ ಹಿಂದೂ ಜಾತಿಗಳ ನಡುವೆ ಕ್ರೈಸ್ತರನ್ನು ನುಗ್ಗಿಸುವ ಹುನ್ನಾರ ರಾಜ್ಯ ಸರ್ಕಾರ ನಡೆಸಿದೆ ಎಂದು ಆರೋಪಿಸಿ ಪಟ್ಟಣದ ಮಾರುತಿ ದೇವಸ್ಥಾನದಿಂದ ಹಿಂದೂಪರ ಸಂಘಟನೆಗಳ ಒಕ್ಕೂಟ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು.