ಕನ್ನಡ ಫಲಕ ಅಳವಡಿಕೆ ಆದೇಶ: ಜಿಲ್ಲಾಧಿಕಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಭಿನಂದನೆಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಪ್ರಮುಖ ಸ್ಥಾನದಲ್ಲಿರಬೇಕು ಮತ್ತು ಶೇ. 60ರಷ್ಟು ಭಾಗ ಕನ್ನಡದಲ್ಲಿ ಇರಬೇಕು ಎಂದು ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರ ಹಾಗೂ ಜಿಲ್ಲೆಯಲ್ಲಿ ಅಳವಡಿಸಲು ಆದೇಶಿಸಿರುವ ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನು ಅಭಿನಂದಿಸಿ ಪತ್ರ ಬರೆಯುವಂತೆ ತೀರ್ಮಾನಿಸಲಾಯಿತು.