ಸೂಕ್ತ ಪರಿಹಾರ ನೀಡಿಲು ಮನವಿಪಟ್ಟಣದ ಹಂಜಗಿ ರಸ್ತೆಯಲ್ಲಿರುವ ಚಂದ್ರಶೇಖರ ಸಾಲೋಟಗಿ ಎಂಬ ರೈತರಿಗೆ ಸೇರಿದ 3 ಎಕರೆ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಸುಟ್ಟು ಕರಕಲಾಗಿವೆ. ಕೂಡಲೇ ಲಿಂಬೆ ಬೆಳೆ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ನೇತೃತ್ವದಲ್ಲಿ ರೈತರು ಎಸಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.